ಬಂಟ್ವಾಳ

ನಡುಮೊಗರು ಶಾಲೆ ತರಗತಿ ಕೊಠಡಿ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಅವರಿಂದ ಶಿಲಾನ್ಯಾಸ

ಜಾಹೀರಾತು

ಬಂಟ್ವಾಳ: ನಡುಮೊಗರು ಶಾಲೆಗೆ ಎಂಆರ್‌ಪಿಎಲ್ ಅನುದಾನದ ಸಹಕಾರದಲ್ಲಿ ಒಟ್ಟು 42 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ತರಗತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್  ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಸೋಮವಾರ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮ ನಡುಮೊಗರು ಸ.ಹಿ.ಪ್ರಾ.ಶಾಲೆಗೆ ನಿರ್ಮಾಣಗೊಳ್ಳಲಿರುವ 4 ತರಗತಿ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಜಾಹೀರಾತು

ಜಿ.ಪಂ ಸದಸ್ಯರಾದ ಬಿ.ಪದ್ಮಶೇಖರ್ ಜೈನ್, ರವೀಂದ್ರ ಕಂಬಳಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಡುಮೊಗರುಗುತ್ತು ಶಿವರಾಮ ಶೆಟ್ಟಿ ಕೆ.ಎನ್., ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಚಿದಾನಂದ ರೈ, ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲ್‌ಗುತ್ತು, ಬೊಳ್ಳುಕಲ್ಲು ನಾರಾಯಣ ಪೂಜಾರಿ, ಆದಂ ಕುಂಞಿ, ಮುಖ್ಯ ಶಿಕ್ಷಕ ಚಂದ್ರ.ಕೆ., ಸಾಯಿ ಗಿರಿಧರ್ ಶೆಟ್ಟಿ, ಧನಂಜಯ ಶೆಟ್ಟಿ ಎನ್., ಶಾಂತಪ್ಪ ಪೂಜಾರಿ ಹಟದಡ್ಕ, ಶಾಲಾ ಶಿಕ್ಷಕ ವೃಂದ, ಹಳೆವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ ಸದಸ್ಯರು,  ಮತ್ತಿತರರು ಉಪಸ್ಥಿತರಿದ್ದರು.  ಶಿಕ್ಷಕ ಮಧುಸೂದನ್ ಸ್ವಾಗತಿಸಿದರು. ಶಿಕ್ಷಕ ಸಂದೇಶ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ