ಬಂಟ್ವಾಳ: ಪ್ರಧಾನಿ ನರೇಂದ್ರಮೋದಿಯವರ ಆಶಯದ ಆತ್ಮನಿರ್ಭರ ಕಾರ್ಯಕ್ರಮದ ಅಂಗವಾಗಿ ಪುತ್ರೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ 7 ಕಡೆಗಳಲ್ಲಿ ನಡೆದ ಉದ್ಯೋಗ ನೈಪುಣ್ಯ ಶಿಕ್ಷಣ ಕಾರ್ಯಕ್ರಮದಲ್ಲಿ 2 ಸಾವಿರ ದಷ್ಟು ಶಿಕ್ಷಾರ್ಥಿಗಳು ತರಬೇತಿ ಪಡೆದಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ.
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪತ್ತೂರು , ಸಹಕಾರ ಭಾರತಿ ದ.ಕ. ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು ಇವುಗಳ ಸಹಯೋಗದೊಂದಿಗೆ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಒಂದು ವಾರದ ಕಾಲ ನಡೆದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಡಾ.ಭಟ್ ಅವರು ಶಿಕ್ಷಾರ್ಥಿಗಳು ಕಲಿತ ಶಿಕ್ಷಣವನ್ನು ತಮ್ಮ ವೃತ್ತಿ ಜೀವನದಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಮಾಜಿ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮಾತನಾಡಿ, ಕೊರೋನ ಮಹಾಮಾರಿಯ ಈ ಸಂದರ್ಭದಲ್ಲಿ ಇಂತಹ ತರಬೇತಿ ಶಿಬಿರ ಸಕಾಲಿಕ ಮತ್ತು ಅಭಿನಂದರ್ಹಾವಾಗಿದೆ ಎಂದರು.
ಪುತ್ರೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಚಾಲಕ ಮಹಾದೇವಶಾಸ್ತ್ರೀ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ ಕೊಡ್ಮಣ್ ಕಾಂತಪ್ಪ ಶೆಟ್ಟಿ, ಗ್ರಾಮ ವಿಕಾಸ ಮಂಗಳೂರು ವಿಭಾಗದ ಪ್ರಮುಖ ವೆಂಕಟರಮಣ ಹೊಳ್ಳ ಬಿ.ಸಿ.ರೋಡ್,ಉದ್ಯಮಿ ಮಂಜುನಾಥ ಪೈ ಬಿ.ಸಿ.ರೋಡು ವೇದಿಕೆಯಲ್ಲಿದ್ದರು.
ಸುಮಾರು 164 ಶಿಕ್ಷಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದು,ಇವರೆಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ವಿನಾಯಕ ಬಿ.ಸಿ.ರೋಡ್ ಸ್ವಾಗತಿಸಿದರು.ಪ್ರಭಾಕರ ಪಿ.ಎಂ.ವಯಕ್ತಿಕ ಗೀತೆ ಹಾಡಿದರು.ನಾಗೇಶ್ ಟೈಲರ್ ವಂದಿಸಿದರು.ಶಿಬಿರದ ಸಂಚಾಲಕ ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು.
ಅಲ್ಯೂಮಿನಿಯಮ್ ಫೆಬ್ರಿಕೇಶನ್ ಮತ್ತು ವೆಲ್ಡಿಂಗ್, ಇಲೆಕ್ಟಿçಕಲ್ ಮತ್ತು ಪ್ಲಂಬಿಂಗ್, ಕೃಷಿ ಯಂತ್ರೋಪಕರಣ ದುರಸ್ತಿ, ಇಲೆಕ್ಟ್ರಿಕ್ ಉಪಕರಣಗಳ ದುರಸ್ತಿ, ಹೈನುಗಾರಿಕೆ, ಗ್ರಾಹಕ ಮಾಹಿತಿ ಕೇಂದ್ರ, ಫ್ಯಾಶನ್ ಡಿಸೈನ್ಸ್, ಜೇನು ಕೃಷಿ ಮತ್ತು ಮೀನು ಸಾಕಾಣಿಕೆ, ಮೊಬೈಲ್ ರಿಪೇರಿ, ಸಿಸಿ ಟಿವಿ ಅಳವಡಿಕೆಯ ಬಗ್ಗೆ ತರಬೇತಿ ನೀಡಲಾಯಿತು.