ಉಳ್ಳಾಲ ತಾಲೂಕು ರಚನೆಯ ಕಾರ್ಯ ಪ್ರಗತಿಯಲ್ಲಿದ್ದು, ಮಂಗಳೂರು ಕ್ಷೇತ್ರಕ್ಕೆ ಬರುವ ಬಂಟ್ವಾಳದ ಕೆಲ ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲವು ಕೂಡ ಉಳ್ಳಾಲ ತಾಲೂಕಿಗೆ ಸೇರ್ಪಡೆಗೊಳ್ಳಲಿವೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಬಂಟ್ವಾಳದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತುಂಬೆ-ಸಜೀಪ ಮಧ್ಯೆ ಸೇತುವೆಯ ಪ್ರಸ್ತಾವನೆ ಸರಕಾರದ ಮುಂದಿದ್ದು, ಅದು ನಿರ್ಮಾಣಗೊಂಡಲ್ಲಿ ಉಳಿದ ಗ್ರಾಮಗಳನ್ನೂ ಉಳ್ಳಾಲಕ್ಕೆ ಸೇರಿಸಲು ಸಹಕಾರಿಯಾಗಲಿದೆ. ಜತೆಗೆ 220 ಕೋ.ರೂ.ಗಳಲ್ಲಿ ಹರೇಕಳ- ಅಡ್ಯಾರ್ ಸೇತುವೆ ಹಾಗೂ 258 ಕೋ.ರೂ.ಗಳ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.
ಈ ಸಂದರ್ಭ ಯು.ಟಿ.ಖಾದರ್ ಅವರ ಹುಟ್ಟುಹಬ್ಬಕ್ಕೆ ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್, ಇರಾ ಗ್ರಾಪಂ ಮಾಜಿ ಅಧ್ಯಕ್ಷ ಅಬ್ದುರ್ ರಝಾಕ್ ಕುಕ್ಕಾಜೆ, ಪುದು ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪ್ರಮುಖರಾದ ಮುರಳೀಧರ ಶೆಟ್ಟಿ ನರಿಂಗಾನ, ಇಕ್ಬಾಲ್, ಶಮೀರ್ ಫಜೀರ್, ಮಜೀದ್ ಫರಂಗಿಪೇಟೆ ವೃಂದಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಉಳ್ಳಾಲ ತಾಲೂಕು ರಚನಾ ಕಾರ್ಯ ಪ್ರಗತಿಯಲ್ಲಿ: ಯು.ಟಿ.ಖಾದರ್"