ಬಂಟ್ವಾಳ

ಕಾಂಗ್ರೆಸ್ ಪಕ್ಷದಿಂದ ರೈ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ 38 ಗ್ರಾಪಂಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯ ಸರ್ಕಾರ ಗ್ರಾಮೀಣ ಜನರಿಗೆ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಮಂಗಳವಾರ ಏಕಕಾಲದಲ್ಲಿ ಪ್ರತಿಭಟನೆ ನಡೆಸಿತು.

ಕಳ್ಳಿಗೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ವೃದ್ಧರು, ಅಶಕ್ತರು, ಮಹಿಳೆಯರು, ವಿಧವೆಯರಿಗೆ ದೊರಕುವ ಪಿಂಚಣಿಯನ್ನೂ ಸಕಾಲಕ್ಕೆ ಒದಗಿಸಲು ಸರ್ಕಾರ ವಿಫಲವಾಗಿದ್ದು, ಈ ಕುರಿತು ರಾಜ್ಯಾದ್ಯಂತ ಗಮನ ಸೆಳೆಯುವುದಾಗಿ ತಿಳಿಸಿದರು.

ಜಾಹೀರಾತು

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ತಾಲೂಕು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಕನಪಾಡಿ, ದಿವಾಕರ ಪಂಬದಬೆಟ್ಟು, ಮದುಸೂಧನ್ ಶೆಣೈ, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ಕಾವಳಪಡೂರು ಗ್ರಾಪಂ ಮುಂಭಾಗ ಮಾತನಾಡಿದ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಸರ್ಕಾರ ಎಲ್ಲ ಹಂತದಲ್ಲೂ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮೋಹನ ಗೌಡ ಕಲ್ಮಂಜ, ಪ್ರಮುಖರಾದ ಚಂದ್ರಶೇಖರ ಕರ್ಣ, ಧನಲಕ್ಷ್ಮೀ ಬಂಗೇರ, ವೀರೇಂದ್ರ ಅಮೀನ್, ಶಾರದಾ ಶೆಟ್ಟಿ, ಅಬ್ದುಲ್ ಲತೀಫ್, ಮಾಣಿಕ್ಯರಾಜ್ ಜೈನ್, ಮೋನಕ್ಕ, ಕ್ಲಿಫರ್ಡ್ ಡಿಸೋಜ, ಜಸ್ಟಿನ್ ಮ್ಯಾಥ್ಯೂ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ