ಬಂಟ್ವಾಳ: ದ.ಕ.ಜಿಲ್ಲೆ ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣ ಮಂಜೂರಾತಿ ಮಾಡುವಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಗೆ ಸ್ಥಳೀಯ ತಾಪಂ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.
ಪಶ್ಚಿಮ ವಾಹಿನಿ ಯೋಜನೆ ಅಡಿಯಲ್ಲಿ ದ.ಕ.ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಿಗೆ ಅಲ್ಲಲ್ಲಿ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣವಾಗುತ್ತಿದೆ. ಅದರಂತೆ ದ.ಕ.ಜಿಲ್ಲೆ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣ ಮಾಡಿದರೆ ಗ್ರಾಮದ ಹಲವಾರು ರೈತ ಕುಟುಂಬಗಳಿಗೆ ತನ್ನ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯಕ್ಕೆ ಅನುಕೂಲವಾಗುತ್ತದೆ. ಲ್ಸೇತುವೆ ನಿರ್ಮಾಣದಿಂದಾಗಿ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದಿಂದ ಮಂಗಳೂರು ತಾಲೂಕಿನ ಇರುವೈಲು ಗ್ರಾಮಕ್ಕೆ ಸಂಪರ್ಕ ಸೇತುವೆ ನಿರ್ಮಾಣವಾಗುತ್ತಿರುವುದರಿಂದ ಸಾವಿರಾರು ಜನರಿಗೆ ತುಂಬಾ ಅನುಕೂಲವಾಗಿ ಮಂಗಳೂರು ಸಂಪರ್ಕಕ್ಕೆ ಸಹಕಾರಿಯಾಗುತ್ತದೆ. ಆದುದರಿಂದ ದ.ಕ.ಜಿಲ್ಲೆ ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣವನ್ನು ಸಣ್ಣ ನೀರಾವರಿ ಇಲಾಖೆಯ ವತಿಯಿಂದ ನಿರ್ಮಿಸಿ ಕೊಡುವಂತೆ ಅಗತ್ಯ ಅನುದಾನ ಮಂಜೂರು ಮಾಡಬೇಕಾಗಿ ಅವರು ವಿನಂತಿ ಮಾಡಿದ್ದಾರೆ.
Be the first to comment on "ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಕಿಂಡಿ ಅಣೆಕಟ್ಟು: ತಾಪಂ ಸದಸ್ಯ ಪ್ರಭು ಮನವಿ"