ಕಲ್ಲಡ್ಕ

ಅಮ್ಟೂರು ಗ್ರಾಮದಲ್ಲಿ 25 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಶಿಲಾನ್ಯಾಸ

ಜಾಹೀರಾತು

ಬಂಟ್ವಾಳ: ಅಮ್ಟೂರು ಗ್ರಾಮದ ಕಟ್ಟೆಮಾರು ಪಡ್ಡೆಮಜಲು ಬಂಗೇರಕೋಡಿಗೆ ಹಾದುಹೋಗುವ 25 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಜಾಹೀರಾತು

ಗೋಳ್ತಮಜಲು ಗ್ರಾಪಂ ವ್ಯಾಪ್ತಿಯ ಅಮ್ಟೂರು ಗ್ರಾಮದ ಕಟ್ಟೆಮಾರು ಪಡ್ಡೆಮಜಲು ಬಂಗೇರಕೋಡಿಗೆ ಹಾದು ಹೋಗುವ ರಸ್ತೆ 25 ಲಕ್ಷ ರೂ ವೆಚ್ಚದ ಶಾಸಕರ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ವಿಟ್ಲ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಅಮ್ಟೂರು ಗ್ರಾಮ ದೈವದ ಭಂಡಾರದ ಮನೆಯ ಪ್ರಮುಖರಾದ ಮೋಹನ್ ರಾಜ್ ಚೌಟ  ತೆಂಗಿನಕಾಯಿ ಹೊಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ತಾಲೂಕು ಪಂಚಾಯಿತಿ ಸದಸ್ಯರಾದ ಮಹಾಬಲ ಆಳ್ವ,  ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ದಿನೇಶ್ ಅಮ್ಟೂರು, ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಬೈದರಡ್ಕ, ಶ್ರೀಧರ್ ಸುವರ್ಣ, ಗ್ರಾಮ ಪಂಚಾಯಿತಿ ಮಾಜಿ  ಸದಸ್ಯರಾದ ಗೋಪಾಲಕೃಷ್ಣ ಪೂವಳ, ಗೋಪಾಲ ಪೂಜಾರಿ, ಜಯಂತ ಗೌಡ, ನಿರಂಜನ ಜೈನ್, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಮಹಾಬಲ ಸಾಲಿಯಾನ್, ಹಾಗೂ ಊರಿನ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು ಬಿಜೆಪಿ ಮುಖಂಡ ದಿನೇಶ್ ಅಮ್ಟೂರು ಸ್ವಾಗತಿಸಿದರು ಗೋಳ್ತಮಜಲು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಗೋಪಾಲಕೃಷ್ಣ ಪೂವಳ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ