ಬಂಟ್ವಾಳ

ಕಾರಿಂಜ: ಭಾರಿ ಮಳೆಗೆ ತಡೆಗೋಡೆ ಕುಸಿತ

ಜಾಹೀರಾತು

ಬಂಟ್ವಾಳ: ಮಂಗಳವಾರದಿಂದೀಚೆಗೆ ಸುರಿದ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ತಡೆಗೋಡೆ ಕುಸಿದು ಬಿದ್ದಿದೆ.

ಈಶ್ವರ (ಶ್ರೀ ಕಾರಿಂಜೇಶ್ವರ) ದೇವಸ್ಥಾನದ ಎಡ ಪಾರ್ಶ್ವ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದ್ದು, ಬುಧವಾರ ಬೆಳಗ್ಗೆ ಸಿಬಂದಿ ಗಮನಕ್ಕೆ ಬಂದಿದೆ.ಇಲ್ಲಿ ಅಂಗಣದಲ್ಲಿ ವಾನರ ಸಮೂಹಕ್ಕೆ ನೈವೇದ್ಯ ನೀಡುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತು ಹೋಗಿದೆ. ದೇವಸ್ಥಾನ ಬೃಹತ್ ಬಂಡೆಯ ಮೇಲೆ ಸ್ಥಾಪಿತಗೊಂಡಿದ್ದು, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿರುವ ಕಾರಿಂಜ ದೇವಸ್ಥಾನಕ್ಕೆ ದೂರದೂರದಿಂದ ಭಕ್ತರು ಬರುತ್ತಾರೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ನಿರ್ಬಂಧ ಇರುವ ಕಾರಣ ನಿಯಮ ಪಾಲನೆಗಳೊಂದಿಗೆ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ . ಪ್ರಸ್ತುತ ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ