ಬಂಟ್ವಾಳ

ಎರಡು ದಿನಗಳ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ

ಜಾಹೀರಾತು

ಬಂಟ್ವಾಳ: ಕಳೆದೆರಡು ದಿನಗಳಿಂದ ಬಂಟ್ವಾಳ ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವ್ಯಾಪಕ ಹಾನಿಗಳಾಗಿದೆ. ಕೆದಿಲ ಗ್ರಾಮದ ಕೃಷ್ಣಮೂರ್ತಿ ಎಂಬವರ 1 ಎಕ್ರೆ ತೋಟ ಜಲಾವೃತಗೊಂಡರೆ, ಸೇಸಪ್ಪ ಮೂಲ್ಯ ಅವರ ಭತ್ತದ ಗದ್ದೆ ನೀರು ತುಂಬಿ ಹಾನಿಯಾಗಿದೆ. ಅಬ್ಬೆಟ್ಟು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆ ಉಮಟಾದರೆ, ಬಾಳ್ತಿಲ ಗ್ರಾಮದ ಸಣ್ಣಕುಕ್ಕುವಿನಲ್ಲಿ ವನಜಾಕ್ಷಿ ಎಂಬವರ ಮನೆ ಗೋಡೆ ಕುಸಿದ ಹಿನ್ನೆಲೆಯಲ್ಲಿ ಮನೆಯವರನ್ನು ಸ್ಥಳಾಂತರಿಸಲಾಯಿತು. ಸಜೀಪಮುನ್ನೂರು ಗ್ರಾಮದ ಅಶ್ರಫ್, ಮೇರಮಜಲು ಗ್ರಾಮದ ಹೂವಯ್ಯ ಪೂಜಾರಿ. ಮೇರಮಜಲು ಗ್ರಾಮದ ತೇವುಕಾಡುನಲ್ಲಿ ಹರಿಶ್ಚಂದ್ರ ಅವರ ಮನೆ ಹಾಗೂ ಮನೆಯ ಸಮೀಪ ಹಾನಿಯಾಗಿವೆ. ನೇತ್ರಾವತಿ ನದಿ 6.2 ಮೀಟರ್ ಎತ್ತರಕ್ಕೆ ಹರಿಯುತ್ತಿದ್ದು  ಅಪಾಯದ ಮಟ್ಟ 8.5 ಮೀಟರ್ ಆಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ