ಪ್ರೊ. ರಾಜಮಣಿ ರಾಮಕುಂಜ
ಬಂಟ್ವಾಳ: ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡದ ಕಲ್ಹಣ ನೀರ್ಪಾಜೆ ಭೀಮಭಟ್ಟರ ಅಭಿಮಾನಿ ಬಳಗ ವತಿಯಿಂದ ಪ್ರೊ. ರಾಜಮಣಿ ರಾಮಕುಂಜ ಬರೆದ ಮೊಡಂಕಾಪು ಸರಿದಂತರ ಪ್ರಕಾಶನ ಪ್ರಕಟಿತ ಕೃತಿ ‘ತಿರುಗುಬಾಣ’ ಬಿಡುಗಡೆ ಸಮಾರಂಭ 18ರಂದು ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದು ಉಭಯ ಸಂಘಟನೆಗಳ ಅಧ್ಯಕ್ಷರಾದ ಕೆ.ಮೋಹನ ರಾವ್ ಮತ್ತು ಬಿ.ಸುದರ್ಶನ ಜೈನ್ ಹೇಳಿದ್ದಾರೆ.ಮಧ್ಯಾಹ್ನ 3.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕೃತಿ ಅನಾವರಣಗೊಳಿಸುವರು. ಅಧ್ಯಕ್ಷತೆಯನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್ ವಹಿಸುವರು. ಮುಖ್ಯ ಅತಿಥಿಗಳಾಗಿ ಮುಂಗ್ಲಿಮಾರ್ ಅಣ್ಣಪ್ಪ ಸ್ವಾಮಿ ಜುಮಾದಿ ಬಂಟ ದೈವಸ್ಥಾನದ ಆಡಳಿತ ಮೊಕ್ತೇಸರ ರವಿಶಂಕರ ಶೆಟ್ಟಿ ಬಡಾಜೆ ಭಾಗವಹಿಸುವರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…