ಬಂಟ್ವಾಳ

ಪ್ರೊ. ರಾಜಮಣಿ ರಾಮಕುಂಜ ಬರೆದ ‘ತಿರುಗುಬಾಣ’ ಕೃತಿ 18ರಂದು ಬಿಡುಗಡೆ

ಪ್ರೊ. ರಾಜಮಣಿ ರಾಮಕುಂಜ

ಬಂಟ್ವಾಳ: ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡದ ಕಲ್ಹಣ ನೀರ್ಪಾಜೆ ಭೀಮಭಟ್ಟರ ಅಭಿಮಾನಿ ಬಳಗ ವತಿಯಿಂದ ಪ್ರೊ. ರಾಜಮಣಿ ರಾಮಕುಂಜ ಬರೆದ ಮೊಡಂಕಾಪು ಸರಿದಂತರ ಪ್ರಕಾಶನ ಪ್ರಕಟಿತ ಕೃತಿ ‘ತಿರುಗುಬಾಣ’ ಬಿಡುಗಡೆ ಸಮಾರಂಭ 18ರಂದು ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದು ಉಭಯ ಸಂಘಟನೆಗಳ ಅಧ್ಯಕ್ಷರಾದ ಕೆ.ಮೋಹನ ರಾವ್ ಮತ್ತು ಬಿ.ಸುದರ್ಶನ ಜೈನ್ ಹೇಳಿದ್ದಾರೆ.ಮಧ್ಯಾಹ್ನ 3.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕೃತಿ ಅನಾವರಣಗೊಳಿಸುವರು. ಅಧ್ಯಕ್ಷತೆಯನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್  ವಹಿಸುವರು. ಮುಖ್ಯ ಅತಿಥಿಗಳಾಗಿ ಮುಂಗ್ಲಿಮಾರ್ ಅಣ್ಣಪ್ಪ ಸ್ವಾಮಿ ಜುಮಾದಿ ಬಂಟ ದೈವಸ್ಥಾನದ ಆಡಳಿತ ಮೊಕ್ತೇಸರ ರವಿಶಂಕರ ಶೆಟ್ಟಿ ಬಡಾಜೆ ಭಾಗವಹಿಸುವರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ