ಪ್ರಮುಖ ಸುದ್ದಿಗಳು

ಕರಾವಳಿಗೆ ಪ್ರತ್ಯೇಕ ಮರಳು ನೀತಿ: ಮುಖ್ಯಮಂತ್ರಿ ಬಿಎಸ್ ವೈ ಅವರಿಗೆ ಕರಾವಳಿ ಶಾಸಕರ ಮನವಿ

ಜಾಹೀರಾತು

ಬಂಟ್ವಾಳ: ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳ ನದಿಗಳಲ್ಲಿ ಮುಳುಗಿ ಮರಳು ತೆಗೆಯುವ ಕ್ರಮ ಬಹಳ ಹಿಂದಿನಿಂದಲೂ ಇದೆ. ಅದನ್ನು ಮುಂದುವರಿಸಬೇಕು.ಕರಾವಳಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು, ಇತರ ಜಿಲ್ಲೆಗಳ ನಿಯಮಗಳು ಇಲ್ಲಿಗೆ ಅನ್ವಯಿಸುವುದಿಲ್ಲ ಅದಕ್ಕಾಗಿ ನದಿಯಲ್ಲಿ ಮರಳು ಗಣಿಗಾರಿಕೆ ನಿಷೇಧವನ್ನು ತೆಗೆಯಬೇಕು. ಇದು ಕೇವಲ ಕರಾವಳಿಗೆ ಜಿಲ್ಲೆಗಳಿಗೆ ಮಾತ್ರ ಅನ್ವಯ ಆಗಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದೇವೆ ಎಂದವರು ಹೇಳಿದ್ದಾರೆ.

ಮಳೆಹಾನಿ ಪರಿಹಾರ ಬಿಡುಗಡೆ ಮಾಡಲು ಕೂಡ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದೇವೆ. ದ.ಕ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಿಂದ ಅಪಾರ ಹಾನಿಯಾಗಿದ್ದು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ವಿತರಣೆಗೆ ಸರಕಾರ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಈ ಮನವಿ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹಿರಿಯ ಶಾಸಕರಾದ ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು,ಡಾ. ವೈ.ಭರತ್ ಶೆಟ್ಟಿ ಉಪಸ್ಥಿತರಿದ್ದರು ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts