ಬಂಟ್ವಾಳ

ಸಕಲ ಸೌಲಭ್ಯಗಳು, ತಜ್ಞ ವೈದ್ಯರೊಂದಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆ ಸುಸಜ್ಜಿತ – ಶಾಸಕ ರಾಜೇಶ್ ನಾಯ್ಕ್

ಜಾಹೀರಾತು

ಬಂಟ್ವಾಳ: 2018ರಿಂದೀಚೆಗೆ ತಾನು ಶಾಸಕನಾದ ಬಳಿಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಮೂಲಸೌಕರ್ಯ ಹೆಚ್ಚಿಸುವ ಕಾರ್ಯ ನಡೆಸಿದ್ದು, ಇದೀಗ ಸುಸಜ್ಜಿತ ಆಸ್ಪತ್ರೆಯಾಗಿ ಮಾರ್ಪಟ್ಟಿದೆ. ಖಾಲಿ ಹುದ್ದೆಗಳು ಭರ್ತಿಯಾಗಿದ್ದು ತಜ್ಞ ವೈದ್ಯರೊಂದಿಗೆ ಸಕಲ ಸೌಕರ್ಯ ಜೊತೆ ಬಂಟ್ವಾಳ ಸರ್ಕಾರಿ ಆಸ್ಪತ್ರೆ ಕಾರ್ಯಾಚರಿಸುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಅಪರಾಹ್ನ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 2 ವರ್ಷಗಳಲ್ಲಿ ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗಿದೆ. ಇದರ ಫಲವಾಗಿಯೇ ಪ್ರಸ್ತುತ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇದ್ದ ಎಲ್ಲಾ ತಜ್ಞ ವೈದ್ಯರು ಹುದ್ದೆಗಳನ್ನು ತುಂಬಲಾಗಿದ್ದು, ಪ್ರಸ್ತುತ ಇವರು ರೋಗಿಗಳ ಚಿಕಿತ್ಸೆ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ ಎಂದರು.

ಬಂಟ್ವಾಳ ಸರ್ಕಾರಿ ಆಸ್ಪತ್ರೆ ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಪಡೆದಿರುವ ತಾಲೂಕು ಆಸ್ಪತ್ರೆಯಾಗಿದ್ದು, ಯಾವುದೇ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲದಂತೆ ಕಾರ್ಯಾಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ತಜ್ಞ ವೈದ್ಯರಿಂದ ರೋಗಿಗಳಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಬೇಕಾಗಿದ ಕೆಲವೊಂದು ಅಧುನಿಕ ವೈದ್ಯಕೀಯ ಉಪಕರಣಗಳ ಅವಶ್ಯಕತೆಗಳು ಕಂಡು ಬಂದಾಗ ಸರಕಾರದ ಅನುದಾನದಡಿ, ವಿವಿಧ ಸಂಘ ಸಂಸ್ಥೆಗಳ, ದಾನಿಗಳ ಸಹಕಾರದಿಂದ ವಿವಿಧ ವೈದ್ಯಕೀಯ ಉಪಕರಣಗಳನ್ನು ಮತ್ತು ಇತರೆ ಸೌಲಭ್ಯಗಳನ್ನು ಈ ಆಸ್ಪತ್ರೆಗೆ ಕಳೆದ 2 ವರ್ಷಗಳಲ್ಲಿ ನೀಡಲಾಗಿದೆ.  ಈಗಾಗಲೇ ಎಂ,ಆರ್,ಪಿ,ಎಲ್ ಸಂಸ್ಥೆಯವರು ಆಸ್ಪತ್ರೆ ನೀಡಿರುವ ಒಂದು ಸುಸಜ್ಜ್ಜಿತ ಅಂಬ್ಯಲೆನ್ಸ್ ಕಾರ್ಯನಿರ್ವಹಿಸುತ್ತಿದೆ. ಕ್ಯಾಡ್ ಸಂಸ್ಥೆಯವರು 5 ಇ.ಸಿ.ಜಿ. ಉಪಕರಗಳನ್ನು ನೀಡಿ ಸಹಕರಿಸಿರುತ್ತಾರೆ. ಮೃತದೇಹಗಳನ್ನು ಇಡಲು ಅನುಕೂಲವಾಗುವಂತೆ 2 ಶೈತ್ಯಾಗಾರಗಳನ್ನು ಲಯನ್ಸ್ ಕ್ಲಬ್‌ನವರು ಮಂದಿನ ತಿಂಗಳು ನವಂಬರ್‌ನಲ್ಲಿ ಆಸ್ಪತ್ರೆಗೆ ನೀಡಲಿದ್ದಾರೆ ಎಂದು ಅವರು ವಿವರಗಳನ್ನು ನೀಡಿದರು.

ಈ ರೀತಿಯಲ್ಲಿ ಕಳೆದ 2 ವರ್ಷಗಳಲ್ಲಿ ಆಸ್ಪತ್ರೆಯಲ್ಲಿ ಮಾಡಲಾದ ವಿವಿಧ ರೀತಿಯ ಸೌಕರ್ಯಗಳ ಅಭಿವೃದ್ಧಿ ಫಲವಾಗಿ ಪ್ರಸ್ತುತ ಅಂದಾಜು 800 ಹೊರ ರೋಗಿಗಳಾಗಿ ಪ್ರತಿದಿನ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಖಾಸಗೀ ಆಸ್ಪತ್ರೆಗೆ ಕಮ್ಮಿ ಇಲ್ಲದಂತೆ ಚಿಕಿತ್ಸೆಯನ್ನು ಸಾರ್ವಜನಿಕರಿಗೆ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಶಾಸಕರು ಹೇಳಿದರು.

ಪುಂಜಾಲಕಟ್ಟೆ ಮೇಲ್ದರ್ಜೆಗೆ: ಆಸ್ಪತ್ರೆಗಳ ಆಧುನೀಕರಣಕ್ಕೆ ಸಂಬಂಧಿಸಿದಂತೆ ಬಹುದಿನಗಳ ಬೇಡಿಕೆಯಾಗಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಕುರಿತಂತೆ ಅ.15ರಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿಯಾಗಿ ಮನವಿ ನೀಡಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿರುತ್ತಾರೆ. ಇದರ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರ ಸಿಬ್ಬಂದಿಗಳನ್ನು ಭರ್ತಿ ಮಾಡುವ ಕುರಿತಂತೆ ಸಚಿವರೊಂದಿಗೆ ಚರ್ಚಿಸಿದ್ದು, ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡುತ್ತಾರೆ ಎಂದವರು ಮಾಹಿತಿ ನೀಡಿದರು.

ಡಿಜಿಟಲ್ ಎಕ್ಸ್ ರೇ ಟಿ ಎಲ್ ಡಿ ಬ್ಯಾಡ್ಜ್, ಅಲ್ಟ್ರಾ ಸೌಂಡ್ ಮೆಶಿನ್, ಇಎನ್ ಟಿ ವರ್ಕ್ ಸ್ಟೇಶನ್, ದಂತ ವೈದ್ಯಕೀಯ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ಸೋಲಾರ್ ಪ್ಲಾಂಟ್, ನವಜಾತ ಶಿಶುಗಳಿಗೆ ವ್ಯವಸ್ಥೆ, ಸಿಸಿ ಕ್ಯಾಮರಾ, ಕೋವಿಡ್ ಟೆಸ್ಟ್ ಗೆ ಆಧುನಿಕ ವ್ಯವಸ್ಥೆ, ಇಸಿಜಿ, ಐದು ವೆಂಟಿಲೇಟರ್ ಗಳನ್ನು ಕಳೆದ ಎರಡು ವರ್ಷಗಳಲ್ಲಿ ಒದಗಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪುಷ್ಪಲತಾ ಮಾಹಿತಿ ನೀಡಿದರು.

ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ವೈದ್ಯಾಧಿಕಾರಿಗಳಿದ್ದು, ಹೆಚ್ಚುವರಿ ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಬಂಟ್ವಾಳ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪುಷ್ಪಲತಾ, ಸಹಾಯಕ ಆಡಳಿತಾಧಿಕಾರಿ ಅನಿತಾ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts