ಪುಂಜಾಲಕಟ್ಟೆ

ಜಾನುವಾರು ಸಾಗಾಟ ಪ್ರಕರಣ ಪತ್ತೆ: ಒಬ್ಬನ ಬಂಧನ – ಪುಂಜಾಲಕಟ್ಟೆ ಪೊಲೀಸರ ಕಾರ್ಯಾಚರಣೆ

ಜಾಹೀರಾತು

ಬಂಟ್ವಾಳ: ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಕರಣವೊಂದನ್ನು  ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿದ್ದು, ಜಾನುವಾರುಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶ ಪಡಿಸಿಕೊಂಡಿದ್ದು, ಒಬ್ಬನನ್ನು ಬಂಧಿಸಲಾಗಿದೆ.

ಬಂಟ್ವಾಳ ತಾಲೂಕು, ಕಾವಳಮುಡೂರು ಗ್ರಾಮದ, ಎನ್‌.ಸಿ ರೋಡ್‌ ಎಂಬಲ್ಲಿ 6-7 ಮಂದಿ ಎಲ್ಲಿಂದಲೋ ಕದ್ದು ತಂದ ದನಕರುಗಳನ್ನು ವಧೆ ಮಾಡುವ ಸಲುವಾಗಿ ಅಕ್ರಮವಾಗಿ ಸಾಗಾಟ ಮಾಡಲು ಮಿನಿ ಟೆಂಪೋವೊಂದಕ್ಕೆ ತುಂಬಿಸುತ್ತಿದ್ದಾಗ ಪುಂಜಾಲಕಟ್ಟೆ ಠಾಣಾ ಪೊಲೀಸ್ ಉಪನಿರೀಕ್ಷಕಿ ಸೌಮ್ಯಾ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಅಂದಾಜು 31 ಸಾವಿರ ರೂ ಬೆಲೆಬಾಳುವ 7 ಹಸುಗಳು,9 ಕರುಗಳು ಹಾಗೂ ಸ್ಕಾರ್ಫಿಯೋ,, ಓಮ್ನಿ ಕಾರುಗಳು, ಮಿನಿ ಟೆಂಪೋ, ಎರಡು ದ್ವಿಚಕ್ರ ವಾಹನಗಳು, 5 ಮೊಬೈಲ್‌ ಸೆಟ್‌ಗಳು ಸೇರಿ ಅಂದಾಜು ಮೌಲ್ಯ 12.48 ಲಕ್ಷ ರೂ ಸೊತ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳ ಪೈಕಿ ಮೊಹಮ್ಮದ್ ರಾಹೀಲ್‌ (18) ಎಂಬಾತನನ್ನು ಬಂಧಿಸಿದ್ದು, ಉಳಿದ ಆರೋಪಿಗಳು ಪರಾರಿಯಾಗಿರುತ್ತಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ: 379 ಐಪಿಸಿ & ಕಲಂ: 4,5,8,9,11,13 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 1964 & ಕಲಂ: 66 ಜೊತೆಗೆ 192(ಎ) ಐ ಎಂ ವಿ  ಕಾಯ್ದೆ & ಕಲಂ: 41(1)(ಡಿ) ಜೊತೆಗೆ 102 ಸಿಆರ್‌ಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts