ಬಿ.ಸಿ.ರೋಡಿನಲ್ಲಿ ಮಹಾಮೃತ್ಯುಂಜಯ ಹೋಮ, ಮಿನಿ ವಿಧಾನಸೌಧದಲ್ಲಿರುವ ದೋಷ ಪರಿಹಾರವಾಗಲಿ ಎಂದು ಪ್ರಾರ್ಥನೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ದೋಷ ಪರಿಹಾರಕ್ಕಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ ಆಯೋಜನೆಯಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ನಡೆಯಿತು.

ಉಡುಪಿ ಚಂದ್ರ ಮೌಳೀಶ್ವರ ದೇವಸ್ಥಾನದ ಅರ್ಚಕರಾದ ಮನೋಹರ ತಂತ್ರಿಯವರ ನೇತೃತ್ವದಲ್ಲಿ ಮತ್ತು ಬಿ.ಸಿ.ರೋಡು ರಕ್ತೇಶ್ವರಿ ದೇವಿ ದೇವಸ್ಥಾನದ ಅರ್ಚಕರಾದ ರಘುಪತಿ ಭಟ್ ರ ಪೌರೋಹಿತ್ಯದಲ್ಲಿ ಮೃತ್ಯಂಜಯ ಹೋಮ ಮತ್ತು ವೈದಿಕ ವಿಧಿ ವಿಧಾನಗಳು ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಹೋಮ ಆಯೋಜಿಸಿದ ಜಿಪಂ ಸದಸ್ಯ ತುಂಗಪ್ಪ ಬಂಗೇರ ಜತೆಗೆ ಪೂರ್ಣಾಹುತಿ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಪಂ ಸದಸ್ಯರಾದ ರವಿಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ಶಂಕರ್ ಬೆದ್ರಮಾರ್ ಪ್ರಮುಖರಾದ ದೇವಪ್ಪ ಪೂಜಾರಿ, ಡೊಂಬಯ್ಯ ಅರಳ, ಸಂತೋಷ್, ಪ್ರಭಾಕರ ಪಿ.ಎಂ. ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡಿನಲ್ಲಿ ಮಹಾಮೃತ್ಯುಂಜಯ ಹೋಮ, ಮಿನಿ ವಿಧಾನಸೌಧದಲ್ಲಿರುವ ದೋಷ ಪರಿಹಾರವಾಗಲಿ ಎಂದು ಪ್ರಾರ್ಥನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*