ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ದೋಷ ಪರಿಹಾರಕ್ಕಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ ಆಯೋಜನೆಯಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ನಡೆಯಿತು.
ಉಡುಪಿ ಚಂದ್ರ ಮೌಳೀಶ್ವರ ದೇವಸ್ಥಾನದ ಅರ್ಚಕರಾದ ಮನೋಹರ ತಂತ್ರಿಯವರ ನೇತೃತ್ವದಲ್ಲಿ ಮತ್ತು ಬಿ.ಸಿ.ರೋಡು ರಕ್ತೇಶ್ವರಿ ದೇವಿ ದೇವಸ್ಥಾನದ ಅರ್ಚಕರಾದ ರಘುಪತಿ ಭಟ್ ರ ಪೌರೋಹಿತ್ಯದಲ್ಲಿ ಮೃತ್ಯಂಜಯ ಹೋಮ ಮತ್ತು ವೈದಿಕ ವಿಧಿ ವಿಧಾನಗಳು ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಹೋಮ ಆಯೋಜಿಸಿದ ಜಿಪಂ ಸದಸ್ಯ ತುಂಗಪ್ಪ ಬಂಗೇರ ಜತೆಗೆ ಪೂರ್ಣಾಹುತಿ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಪಂ ಸದಸ್ಯರಾದ ರವಿಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ಶಂಕರ್ ಬೆದ್ರಮಾರ್ ಪ್ರಮುಖರಾದ ದೇವಪ್ಪ ಪೂಜಾರಿ, ಡೊಂಬಯ್ಯ ಅರಳ, ಸಂತೋಷ್, ಪ್ರಭಾಕರ ಪಿ.ಎಂ. ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…