ಬಂಟ್ವಾಳ: ಪಾಣೆಮಂಗಳೂರಿನ ಗೂಡಿನ ಬಳಿಯ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ್ನು ಗೂಡಿನ ಬಳಿಯ ಮಹಮ್ಮದ್ ಮತ್ತವರ ತಂಡ ರಕ್ಷಿಸಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಮೂಲತಃ ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದ್ದು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್ ಇಂದು ಬೆಳಿಗ್ಗೆ 8.15 ರ ಸುಮಾರಿಗೆ ತನ್ನ ಖಾಕಿ ಸಮವಸ್ತ್ರ ಧರಿಸಿಕೊಂಡೆ ಸೇತುವೆಯ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ ಮಹಮ್ಮದ್ ಅವರಿಗೆ ತಿಳಿಸಿದ್ದಾರೆ. ದೋಣಿಯ ಮೂಲಕ ತೆರಳಿದ ಮಹಮ್ಮದ್ ಯುವಕನ್ನು ನೀರಿನಿಂದ ಮೇಲಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ. ಮಹಮ್ಮದ್ ಅವರ ಈ ಕಾರ್ಯಚರಣೆಯಲ್ಲಿ ಶಿಹಾಬ್ ಮತ್ತು ಸ್ವಾಲಿ ಎಂಬವರು ಸಹಕಾರ ನೀಡಿದ್ದಾರೆ. ಇತ್ತೀಚೆಗೆ ಸೇವಾಂಜಲಿ ಪ್ರತಿಷ್ಠಾನದ ಸೇವಾ ರಕ್ಷಕ್ ದೋಣಿಯನ್ನು ಕೊಡುಗೆಯಾಗಿ ನೀಡಿದ್ದು ಯುವಕನ ರಕ್ಷಣೆಗೆ ಈ ದೋಣಿ ನೆರವಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಸೇತುವೆಯಿಂದ ಹಾರಿ ಆತ್ಮಹತ್ಯೆ ಯತ್ನಿಸಿದಾತನನ್ನು ಪಾರು ಮಾಡಿದ ನೇತ್ರಾವತಿವೀರರು"