ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 21ರಂದು ಶಿಲಾನ್ಯಾಸ

ಜಾಹೀರಾತು

ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಜೀರ್ಣೋದ್ಧಾರದ ಅಂಗವಾಗಿ  ಅಕ್ಟೋಬರ್ 21ರ ಬುಧವಾರದಂದು ಬೆಳಗ್ಗೆ 9 ಗಂಟೆಗೆ ನೂತನವಾಗಿ ನಿರ್ಮಾಣಗೊಳ್ಳಲಿರುವ ಶಿಲಾಮಯ ಶ್ರೀ ಶಕ್ತಿ ಮಹಾಗಣಪತಿ ದೇವರ ಗರ್ಭಗುಡಿಯ ಹಾಗೂ ಸುತ್ತು ಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಲಿದೆ.

ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಕೆ ಪ್ರಭಾಕರ ಭಟ್, ಧಾರ್ಮಿಕ ದತ್ತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ದ.ಕ. ಜಿ ಪಂ  ಮಾಜಿ ಅಧ್ಯಕ್ಷ ಬಿ ಸದಾನಂದ ಪೂಂಜಾ, ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ತಾಲೂಕು ಪಂಚಾಯಿತಿ ಸದಸ್ಯ ಸವಿತಾ ಹೇಮಂತ ಕರ್ಕೇರ, ಗಡಿ ಪ್ರಧಾನರಾದ ಮುಂಡಪ್ಪ ಶೆಟ್ಟಿ ಸಜಿಪಗುತ್ತು, ವಿವೇಕ್ ಶೆಟ್ಟಿ ನಗ್ರಿಗುತ್ತು, ಉದ್ಯಮಿ ರೋಹಿತ್ ಶೆಟ್ಟಿ ನಗ್ರಿಗುತ್ತು, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ  ಟಿ ಜಿ ರಾಜಾರಾಮ ಭಟ್, ಉದ್ಯಮಿ ರವೀಂದ್ರ ಭಂಡಾರಿ ಪುಣ್ಕೆಮಜಲ್, ಪ್ರಮುಖರಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಯತೀಶ ಭಂಡಾರಿ, ಮಂಜಪ್ಪ, ಶ್ರೀಕಾಂತ್ ಶೆಟ್ಟಿ ಸಂಕೇಶ, ಜಿತೇಂದ್ರ ಕುಮಾರ್ ದೇರಾಜೆಗುತ್ತು, ಗಣೇಶ ಸೋಮಯಾಜಿ ಜಯಶಂಕರ ಬಾಸ್ರಿತ್ತಾಯ, ಸದಾಶಿವ ಶೆಟ್ಟಿ, ಬೇಬಿ ಅರಸ, ಎಸ್ ಎಂ ಗೋಪಾಲಕೃಷ್ಣ ಆಚಾರ್ಯ, ಐತಪ್ಪ ಆಳ್ವ, ಸುಜೀರ್ಗುತ್ತು, ಗಣೇಶ್, ಷ್ಣು ಪ್ರಸಾದ್ ಹೆಗ್ಡೆ ಮೊದಲಾದವರು ಭಾಗವಹಿಸಲಿದ್ದಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 21ರಂದು ಶಿಲಾನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*