ಬಂಟ್ವಾಳ: ಪ್ರತಿಯೊಬ್ಬರು ಆಧ್ಯಾತ್ಮಿಕ ಕಡೆಗೆ ಅಂಟಿಕೊಂಡಾಗ ಆರೋಗ್ಯಪೂರ್ಣ ಬದುಕು ನಿರ್ಮಾಣಗೊಳ್ಳುತ್ತದೆ. ಆಧ್ಯಾತ್ಮದಲ್ಲಿ ನಿಜವಾದ ಆನಂದ ಅಡಕವಾಗಿದೆ. ಎಲ್ಲಾ ರೋಗಗಳಿಗೆ ಔಷಧಿ ಆಧ್ಯಾತ್ಮದಲ್ಲಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆದ ಶ್ರೀ ಲಲಿತಾ ಪಂಚಮಿ ಮಹೋತ್ಸವ – ಶ್ರೀ ಚಂಡಿಕಾಯಾಗ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಸಾಧ್ವೀ ಮಾತಾನಂದಮಯೀ ಉಪಸ್ಥಿತರಿದ್ದರು. ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಬೆಳಿಗ್ಗೆ ಮಂಗಳಾರತಿಯ ಬಳಿಕ ಶ್ರೀ ನಾಗದೇವರಿಗೆ ನಾಗತಂಬಿಲ, ಶ್ರೀ ಚಂಡಿಕಾ ಯಾಗವು ಆರಂಭಗೊಂಡು ಮಧ್ಯಾಹ್ನ ಗಂಟೆ 12ಕ್ಕೆ ಯಾಗದ ಪೂರ್ಣಾಹುತಿ, ಮಹಾಮಂಗಳಾರತಿ, ಆರಾಧ್ಯದೇವರಿಗೆ ಮಹಾಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಡಿ. ಮನೋಹರಕುಮಾರ್ ಯಕ್ಷಬಳಗ, ಮಂಗಳೂರು ಇವರಿಂದ ’ಶಾಂಭವಿ ವಿಜಯ’ ತುಳು ಯಕ್ಷಗಾನ ಬಯಲಾಟ. ರಾತ್ರಿ ಅಷ್ಟಾವಧಾನ ಸೇವೆ, ಮಹಾಪೂಜೆ ನಡೆಯಿತು.
(more…)