ವಿಟ್ಲ

ಆಧ್ಯಾತ್ಮದ ಕಡೆ ಒಲವು ಇದ್ದರೆ ಆರೋಗ್ಯಪೂರ್ಣ ಬದುಕು: ಒಡಿಯೂರು ಶ್ರೀಗಳು

ಜಾಹೀರಾತು

ಬಂಟ್ವಾಳ: ಪ್ರತಿಯೊಬ್ಬರು ಆಧ್ಯಾತ್ಮಿಕ ಕಡೆಗೆ ಅಂಟಿಕೊಂಡಾಗ ಆರೋಗ್ಯಪೂರ್ಣ ಬದುಕು ನಿರ್ಮಾಣಗೊಳ್ಳುತ್ತದೆ. ಆಧ್ಯಾತ್ಮದಲ್ಲಿ ನಿಜವಾದ ಆನಂದ ಅಡಕವಾಗಿದೆ. ಎಲ್ಲಾ ರೋಗಗಳಿಗೆ ಔಷಧಿ ಆಧ್ಯಾತ್ಮದಲ್ಲಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಜಾಹೀರಾತು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆದ ಶ್ರೀ ಲಲಿತಾ ಪಂಚಮಿ ಮಹೋತ್ಸವ – ಶ್ರೀ ಚಂಡಿಕಾಯಾಗ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.  ಸಾಧ್ವೀ ಮಾತಾನಂದಮಯೀ ಉಪಸ್ಥಿತರಿದ್ದರು. ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಬೆಳಿಗ್ಗೆ ಮಂಗಳಾರತಿಯ ಬಳಿಕ ಶ್ರೀ ನಾಗದೇವರಿಗೆ ನಾಗತಂಬಿಲ, ಶ್ರೀ ಚಂಡಿಕಾ ಯಾಗವು ಆರಂಭಗೊಂಡು ಮಧ್ಯಾಹ್ನ ಗಂಟೆ 12ಕ್ಕೆ ಯಾಗದ ಪೂರ್ಣಾಹುತಿ, ಮಹಾಮಂಗಳಾರತಿ, ಆರಾಧ್ಯದೇವರಿಗೆ ಮಹಾಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಡಿ. ಮನೋಹರಕುಮಾರ್ ಯಕ್ಷಬಳಗ, ಮಂಗಳೂರು ಇವರಿಂದ ’ಶಾಂಭವಿ ವಿಜಯ’ ತುಳು ಯಕ್ಷಗಾನ ಬಯಲಾಟ. ರಾತ್ರಿ ಅಷ್ಟಾವಧಾನ ಸೇವೆ, ಮಹಾಪೂಜೆ ನಡೆಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ