ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಅವರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

ಜಾಹೀರಾತು

ಬಂಟ್ವಾಳ: ಪ್ರತಿಭಾವಂತರನ್ನು ಗುರುತಿಸಿ, ಅವರನ್ನು ಸನ್ಮಾನಿಸಿ, ಗೌರವಿಸಿ, ಅಭಿನಂದಿಸುವುದು ಒಳ್ಳೆಯ ಕೆಲಸವಾಗಿದ್ದು, ಆ ರೀತಿ ಮಾಡುವುದರಿಂದ ಇತರೇ ವ್ಯಕ್ತಿ ಯಾ ವಿದ್ಯಾರ್ಥಿಗಳು ಸಾಧನೆ ಮಾಡುವುದಕ್ಕೆ ಪ್ರೇರಣೆ ಆಗಲಿದೆ ಎಂದು ಬೆಂಗಳೂರುನ ನಿವೃತ್ತ ಪೊಲೀಸ್ ಆಯುಕ್ತ ಜಿ.ಎ. ಬಾವಾ ಹೇಳಿದರು.

ಹಿದಾಯ ಫೌಂಡೇಶನ್ ಮಂಗಳೂರು ವತಿಯಿಂದ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿರುವ ಹಿದಾಯ ಶೇರ್ ಎಂಡ್ ಕೇರ್ ಕಾಲೋನಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕ ಯಾಕೂಬ್ ಕೆ. ಇವರ ಸನ್ಮಾನ ಮತ್ತು ಹಿದಾಯ ಶೇರ್ ಎಂಡ್ ಕೇರ್ ಕಾಲೋನಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ಲಯನ್ಸ್ ಜಿಲ್ಲಾ ಗವರ್ನರ್ ಡಾ. ಗೀತಪ್ರಕಾಶ್, ಸನ್ಮಾನ ಸ್ವೀಕರಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕ ಯಾಕೂಬ್ ಕೆ. ಮಾತನಾಡಿದರು, ಹಿದಾಯ ಫೌಂಡೇಶನ್ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಬಿ. ಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ, ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿ ಆಶಿಕಾ ಮಾತನಾಡಿದರು. ಉದ್ಯಮಿಗಳಾದ ಆಶಿಫ್ ಕರ್ನಿರೆ, ಶೌಕತ್, ಶರೀಫ್ ವೈಟ್‌ಸ್ಟೋನ್, ಅಬೂಬಕ್ಕರ್ ಸಿದ್ದಿಕ್, ಸಂಸ್ಥೆಯ ಕೋಶಾಧಿಕಾರಿ ಝಿಯಾವುದ್ದೀನ್ ಉಪಸ್ಥಿತರಿದ್ದರು. ಹಿದಾಯ ಫೌಂಡೇಶನ್‌ನ ಅಬ್ದುಲ್ ರಜಾಕ್ ಅನಂತಾಡಿ ಸ್ವಾಗತಿಸಿ, ಆದಿದ್ ಅಸ್ಕರ್ ವಂದಿಸಿದರು. ಬಿ. ಮಹಮ್ಮದ್ ತುಂಬೆ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಅವರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*