ಬಂಟ್ವಾಳದ ಅಪಾರ್ಟ್ ಮೆಂಟ್ ಒಂದರಲ್ಲಿ ಹತ್ಯೆಗೀಡಾದ ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಹಂತಕರ ಪತ್ತೆಗೆ ಪೊಲೀಸರು ವಿವಿಧ ತಂಡಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಶೀಘ್ರ ಆರೋಪಿಗಳನ್ನು ಹಿಡಿಯುವ ವಿಶ್ವಾಸ ತಮಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಬಂಟ್ವಾಳ ಭಂಡಾರಿಬೆಟ್ಟಿನ ಅಪಾರ್ಟ್ ಮೆಂಟ್ ನಲ್ಲಿ ಹತ್ಯೆಗೀಡಾದ ಫ್ಲ್ಯಾಟ್ ಗೆ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಬಳಿಕ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಸಿಐ ನಾಗರಾಜ್, ಎಸ್ಸ್ಐಗಳಾದ ನಂದಕುಮಾರ್, ಪ್ರಸನ್ನ ಅವರಿಗೆ ವಿವಿಧ ಸೂಚನೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾತ್ರಿ ನಡೆದಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಸಾಕ್ಷಿ ಆಧಾರಗಳ ಸಂಗ್ರಹ ನಡೆಯುತ್ತಿದೆ. ಅವರು ಎಲ್ಲೆಲ್ಲಿ ವ್ಯವಹಾರ ಮಾಡುತ್ತಿದ್ದರೋ ಅದನ್ನು ಪರಿಶೀಲಿಸುತ್ತಿದ್ದೇವೆ ಎಂದರು. ತಂಡಗಳನ್ನು ರಚಿಸಿ ತನಿಖೆ ತೀವ್ರಗತಿಯಲ್ಲಿ ನಡೆಸುತ್ತಿದ್ದೇವೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವುದಾಗಿ ಎಸ್ಪಿ ತಿಳಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ – ತಂಡಗಳ ರಚಿಸಿ ತನಿಖೆ: ಎಸ್ಪಿ ಡಾ. ಲಕ್ಷ್ಮೀಪ್ರಸಾದ್"