ಬಂಟ್ವಾಳ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹಿಳೆಯರನ್ನು ನೆನಪಿಸಿ ಕೊಳ್ಳುವಾಗ ಕಿತ್ತೂರು ರಾಣಿ ಚೆನ್ನಮ್ಮ ಅಗ್ರಪಂಕ್ತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. .ಬ್ರಿಟಿಷರ ಸೈನ್ಯವನ್ನು ಎದುರಿಸುವ ಅವರ ಸಾಮರ್ಥ್ಯ.ದೇಶ ಭಕ್ತರನ್ನು ಒಗ್ಗೂಡಿಸಿ ರಾಷ್ಟ್ರವನ್ನು ಉಳಿಸಲು ಹೋರಾಡಿದ ರೀತಿ ಎಲ್ಲರಿಗೂ ಆದರ್ಶ ಎಂದವರು ತಿಳಿಸಿದರು. ಈ ಸಂದರ್ಭ ಉಪತಹಸೀಲ್ದಾರ್ ರವಿಶಂಕರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು. ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಸ್ವಾಗತಿಸಿ ವಂದಿಸಿದರು.