ಬಂಟ್ವಾಳ: ಕೆಲ ದಿನಗಳ ಹಿಂದೆ ಇತಿಹಾಸ ಪ್ರಸಿದ್ಧ ಕಾರಿಂಜ ದೇವಸ್ಥಾನದ ಪಕ್ಕದ ತಡೆಗೋಡೆ ಕುಸಿದಿದ್ದು, ಅಪಾಯಕಾರಿಯಾಗಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ವೀಕ್ಷಿಸಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅ.26ರ ಸೋಮವಾರ ಬೆಳಗ್ಗೆ 9.30ಕ್ಕೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರೂ ಉಪಸ್ಥಿತರಿರುವರು. ಇದೇ ಸಂದರ್ಭ ಇಲಾಖಾಧಿಕಾರಿಗಳು ಜೊತೆಗಿರುವರು ಎಂದು ಬಂಟ್ವಾಳ ಶಾಸಕ ಕಚೇರಿ ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…