ಬಂಟ್ವಾಳ: ಶಿಕ್ಷಕರು ಮಕ್ಕಳ ಜೊತೆಗೆ ಮಕ್ಕಳಾಗಿ ಬೆರೆತಾಗ ಹೆಚ್ಚು ಆತ್ಮೀಯರಾಗಿರುತ್ತಾರೆ. ವಿಧ್ಯಾರ್ಥಿಗಳೊಂದಿಗೆ ಸ್ನೇಹಿತರಾದಾಗ ಸಂಬಂಧ ಗಟ್ಟಿಯಾಗಿ ಉಳಿಯುತ್ತದೆ. ಒಂದು ಶಾಲೆಯ ಅಭಿವೃದ್ಧಿಯಲ್ಲಿ ಮುಖ್ಯ ಶಿಕ್ಷಕರ ಜೊತೆ ಸಹಶಿಕ್ಷಕರು ಕೈ ಜೋಡಿಸಿದಾಗ ಮಾತ್ರ ಶಾಲೆಯ ಪ್ರಗತಿ ಸಾಧ್ಯ ಈ ನಿಟ್ಟಿನಲ್ಲಿ ಸಂಗೀತ ಶರ್ಮ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ವಿಟ್ಲ ಗ್ರಾಮೀಣ ಬ್ಯಾಂಕಿನ ನಿರ್ದೇಶಕರಾದ ವಿಶ್ವನಾಥ ಎಂ 2020ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಿಕ್ಷಕಿ ಸಂಗೀತ ಶರ್ಮ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ಶಾರದಾ ಪೂಜಾ ಕಾರ್ಯಕ್ರಮದ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಹಾಗೂ ಊರವರ ವತಿಯಿಂದ ಅಭಿನಂದಿಸಿ ಮಾತನಾಡಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ಮೂಲ್ಯ ಮಜಿ, ಉಪಾಧ್ಯಕ್ಷ ವಿಜಯ್ ಶೇಖರ್ ಬಿ, ವೀರಕಂಬ ಗ್ರಾಮ ಪಂಚಾಯತಿನ ಮಾಜಿ ಸದಸ್ಯ ರಾಮಚಂದ್ರ ಪ್ರಭು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಕಂಬ ಒಕ್ಕೂಟ ಅಧ್ಯಕ್ಷ ಕೊರಗಪ್ಪ ನಾಯ್ಕ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರ, ಮಾತೃಶ್ರೀ ಗೆಳೆಯರ ಬಳಗದ ಸುಧಾಕರ್ ಮೈರ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಭಿಮಾನಿಗಳು, ಶಾಲಾ ಶಿಕ್ಷಕರು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.