ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಹತ್ಯೆಯಾದ ಸುರೇಂದ್ರ ಬಂಟ್ವಾಳ್ ಅವರ ಹತ್ಯೆಯ ಎಲ್ಲಾ ಆರೋಪಿಗಳನ್ನು ತತ್‌ಕ್ಷಣ ಬಂಧಿಸಿ ಕಠಿನ ಶಿಕ್ಷೆಗೊಳಪಡಿಸಬೇಕು ಎಂದು ಬಂಟ್ವಾಳ ಭಂಡಾರಿ ಸಮಾಜ ಸಂಘ ಬಂಟ್ವಾಳ ಡಿವೈಎಸ್‌ಪಿ ಅವರಿಗೆ ಮನವಿ ನೀಡಿ ಆಗ್ರಹಿಸಿದೆ. ಬಂಟ್ವಾಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಕಕ್ಕೆಪದವು ಪುಣ್ಕೆದಡಿ ಅವರ ನೇತೃತ್ವದಲ್ಲಿ ಸಂಘದ ಸದಸ್ಯರು ಮಂಗಳವಾರ ಡಿವೈಎಸ್‌ಪಿ ಕಚೇರಿಗೆ ಭೇಟಿ ನೀಡಿ, ಸಮಾಜದ ದಾನಿಯಾಗಿ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಅವರು ಚಲನಚಿತ್ರ ನಟರಾಗಿ, ಗಣ್ಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ನಾವು ಅವರ ಹತ್ಯೆಯನ್ನು ಖಂಡಿಸುತ್ತಿದ್ದು, ಜತೆಗೆ ಆರೋಪಿಗಳನ್ನು ಕಠಿನ ಶಿಕ್ಷಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸುರೇಂದ್ರ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ: ಭಂಡಾರಿ ಸಮಾಜ ಒತ್ತಾಯ"