ಬಂಟ್ವಾಳ

ಸುರೇಂದ್ರ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ: ಭಂಡಾರಿ ಸಮಾಜ ಒತ್ತಾಯ

ಜಾಹೀರಾತು

ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಹತ್ಯೆಯಾದ ಸುರೇಂದ್ರ ಬಂಟ್ವಾಳ್ ಅವರ ಹತ್ಯೆಯ ಎಲ್ಲಾ ಆರೋಪಿಗಳನ್ನು ತತ್‌ಕ್ಷಣ ಬಂಧಿಸಿ ಕಠಿನ ಶಿಕ್ಷೆಗೊಳಪಡಿಸಬೇಕು ಎಂದು ಬಂಟ್ವಾಳ ಭಂಡಾರಿ ಸಮಾಜ ಸಂಘ ಬಂಟ್ವಾಳ ಡಿವೈಎಸ್‌ಪಿ ಅವರಿಗೆ ಮನವಿ ನೀಡಿ ಆಗ್ರಹಿಸಿದೆ. ಬಂಟ್ವಾಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಕಕ್ಕೆಪದವು ಪುಣ್ಕೆದಡಿ ಅವರ ನೇತೃತ್ವದಲ್ಲಿ ಸಂಘದ ಸದಸ್ಯರು ಮಂಗಳವಾರ ಡಿವೈಎಸ್‌ಪಿ ಕಚೇರಿಗೆ ಭೇಟಿ ನೀಡಿ, ಸಮಾಜದ ದಾನಿಯಾಗಿ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಅವರು ಚಲನಚಿತ್ರ ನಟರಾಗಿ, ಗಣ್ಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ನಾವು ಅವರ ಹತ್ಯೆಯನ್ನು ಖಂಡಿಸುತ್ತಿದ್ದು, ಜತೆಗೆ ಆರೋಪಿಗಳನ್ನು ಕಠಿನ ಶಿಕ್ಷಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts