ಫರಂಗಿಪೇಟೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ, ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್

ಜಾಹೀರಾತು

ಜಾಹೀರಾತು

ವಾರದ ಅವಧಿಯಲ್ಲಿ ಬಂಟ್ವಾಳ ಮತ್ತು ಮೇಲ್ಕಾರ್ ನಲ್ಲಿ ಭೀಕರ ಹತ್ಯೆ ಘಟನೆಗಳು ಇನ್ನೂ ಹಸಿಯಾಗಿರುವಂತೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಮತ್ತೊಂದು ದಾಳಿ ಸಂಭವಿಸಿದೆ. ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ನುಗ್ಗಿ ಮಾರಣಾಂತಿಕವಾಗಿ ದಾಳಿ ನಡೆಸಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫರಂಗಿಪೇಟೆಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟುಡಿಯೋ ಮಾಲಕ, ಬಿಜೆಪಿ ಪುದು ಶಕ್ತಿ ಕೇಂದ್ರದ  ಸಾಮಾಜಿಕ ಜಾಲ ತಾಣದ ಸಂಚಾಲಕ  ದಿನೇಶ್ ಶೆಟ್ಟಿ ಕೊಟ್ಟಿಂಜ ಅವರ ಮೇಲೆ ತಂಡವೊಂದು ಬಂದು ದಾಳಿ ನಡೆಸಿದೆ.

ಜಾಹೀರಾತು

ರಾತ್ರಿ ಸುಮಾರು 7.50 ರ ಸುಮಾರಿಗೆ ಕಟ್ಟಡದ ಮೊದಲ ಮಹಡಿಯಲ್ಲಿರುವ ಅವರ ಸ್ಟುಡಿಯೋಗೆ ನುಗ್ಗಿ ಮಾರಾಕಾಯುಧಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕಟ್ಟಡದ ಮೊದಲ ಮಹಡಿಯಲ್ಲಿ  ರಾತ್ರಿ ವೇಳೆ ಅವರ ಸ್ಟುಡಿಯೋ ಮಾತ್ರ ತೆರೆದಿದ್ದು ಈ ಸಂದರ್ಭದಲ್ಲಿ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಿಂದ ಅವರ ತಲೆ ಹೊಟ್ಟೆ ಮತ್ತಿತರ ಭಾಗಗಳಿಗೆ ಗಾಯವಾಗಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ದಿನೇಶ್ ಕೊಟ್ಟಿಂಜ ಅವರು ಪೊಟೋ ಗ್ರಾಫರ್ ಆಗಿರುವುದರ ಜೊತೆಗೆ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದುಕೊಂಡು ವಿವಿಧ ಜವಬ್ದಾರಿಗಳನ್ನು ನಿಭಾಯಿಸಿದ್ದರು. ಸಾಮಾಜಿಕ, ಧಾರ್ಮಿಕ ಚಟುವಟಿಕೆಯಲ್ಲೂ ಸಕ್ರಿಯರಾಗಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಪತ್ತೆಗಾಗಿ ಬಲೆ ಬೀಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಶೋಧ ಕಾರ್ಯ ನಡೆದಿದ್ದು, ಎಲ್ಲೆಡೆ ನಾಕಾಬಂಧಿ ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು ಬಿ.ಸಿ.ರೋಡ್ ಮಧ್ಯೆ ಫರಂಗಿಪೇಟೆ ಇದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಫರಂಗಿಪೇಟೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ, ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*