ಪ್ರಮುಖ ಸುದ್ದಿಗಳು

ಬಂಟ್ವಾಳ ತಾಲೂಕಿನ ಇಬ್ಬರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಜಾಹೀರಾತು

ವಲ್ಲಿ ವಗ್ಗ

ಕುಸುಮೋದರ ಶೆಟ್ಟಿ ಚೆಲ್ಲಡ್ಕ

ಬಂಟ್ವಾಳ: ಬಂಟ್ವಾಳ ತಾಲೂಕಿನ ಇಬ್ಬರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಕಥೆಗಾರ ವಲೇರಿಯನ್ ಡಿಸೋಜ (ವಲ್ಲಿ ವಗ್ಗ) ಮತ್ತು ಹೊರನಾಡ ಕನ್ನಡಿಗ, ಸಾಧಕ ಕುಸುಮೋದರ ಶೆಟ್ಟಿ (ಕೆ.ಡಿ.ಶೆಟ್ಟಿ) ಅವರಿಗೆ ಪ್ರಶಸ್ತಿ ಘೋಷಣೆಯಾಗಿದೆ.

ಕುಸುಮೋದರ ದೇರಣ್ಣ ಶೆಟ್ಟಿ (ಕೆ.ಡಿ.ಶೆಟ್ಟಿ)ಯವರು ಭವಾನಿ ಶಿಪ್ಪಿಂಗ್ ಸರ್ವೀಸಸ್ ಇಂಡಿಯಾ ಪ್ರೈ ಲಿ. ಎಂಬ ಸಂಸ್ಥೆಯನ್ನು ಸ್ಥಾಪಿಸಿ ಜನಪ್ರಿಯರಾಗಿದ್ದಾರೆ. ಬಂಟ್ವಾಳ ತಾಲೂಕಿನ ಚೆಲ್ಲಡ್ಕಗುತ್ತುವಿನವರಾದ ಅವರು ಕೇಪುವಿನ ದ.ಕ.ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ ಮತ್ತು ಕುಂಡಕೋಳಿ ಅಮೈನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮತ್ತು ಅಡ್ಯನಡ್ಕದ ಜನತಾ ಹೈಸ್ಕೂಲಿನಿಂದ ಮಾಧ್ಯಮಿಕ ವಿದ್ಯಾಭ್ಯಾಸ ಮಾಡಿ ಬಳಿಕ ಮುಂಬೈ ವಿವಿಯಿಂದ ಬಿಕಾಂ ಪದವಿ ಪಡೆದವರು. ಶಿಪ್ಪಿಂಗ್ ಉದ್ಯಮದಲ್ಲಿ ದೇಶ, ವಿದೇಶಗಳಲ್ಲಿ ಅವರು ಹೆಸರುವಾಸಿ. ಭವಾನಿ ಫೌಂಡೇಶನ್ ಟ್ರಸ್ಟ್ ಮೂಲಕ ಸಮಾಜಸೇವೆಯನ್ನು ಮಾಡುತ್ತಿದ್ದಾರೆ.

ದ.ಕ. ಜಿಲ್ಲೆಯಿಂದ ಪ್ರಶಸ್ತಿಗೆ ಆಯ್ಕೆಯಾದ ವಲೇರಿಯನ್ ಡಿಸೋಜ ಅವರು ಮೂಲತ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗದವರಾಗಿದ್ದು, ಕಳೆದ ೫೦ ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದಾರೆ. ತನ್ನ ೧೭ ನೇ ವಯಸ್ಸಿನಿಂದ ಸಣ್ಣ ಕಥೆ ಬರೆಯಲು ಆರಂಭಿಸಿದ ಅವರು ೫೬ ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ನೂರಾರು  ಕೊಂಕಣಿ ಸಣ್ಣಕಥೆ, ಕವನ, ಲೇಖನ, ಅಂಕಣ ಬರಹಗಳು ಪ್ರಕಟವಾಗಿದ್ದು, ಆಯ್ದ ಸಣ್ಣಕಥೆಗಳು ಹಿಂದಿ, ತೆಲುಗು, ಇಂಗ್ಲಿಷ್ ಭಾಷೆಗೆ ಅನುವಾದಗೊಂಡಿದೆ. ಅವರೇ ಅನುವಾದಿಸಿದ ಅವರ ಕಥೆಗಳು ಹಲವಾರು ಕನ್ನಡ  ದಿನ ಮತ್ತು ವಾರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಕಥಾ ಸಂಕಲನ, ಕವನ ಸಂಕಲನಗಳು ಪ್ರಕಟವಾಗಿದೆ. ವಿವಿಧ ಕವಿ ಗೋಷ್ಠಿ, ವಿಚಾರಗೋಷ್ಠಿಗಳಲ್ಲಿ  ಭಾಗವಹಿಸಿ ಪ್ರಬಂಧ ಮಂಡಿಸಿದ್ದಾರೆ. ಇವರ ಸಮಗ್ರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಕೊಂಕಣಿ ಸಾಹಿತ್ಯ ಅಕಾಡೆಮಿ, ದಾಯ್ಜಿ ದುಬ-೨೦೧೯ ಪ್ರಶಸ್ತಿ, ಕೊಂಕಣಿ ಕುಟಾಮ್ ಬಹರೈನ್, ಸಂದೇಶ ಪ್ರತಿಷ್ಠಾನ ಮಂಗಳೂರು ಅವರು  ಸಾಹಿತ್ಯ ಗೌರವ ಪ್ರಶಸ್ತಿ ನೀಡಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts