ಫರಂಗಿಪೇಟೆ

ಫರಂಗಿಪೇಟೆ ಸ್ಟುಡಿಯೋ ಮಾಲೀಕ ಮೇಲೆ ಮಾರಣಾಂತಿಕ ಹಲ್ಲೆ: ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸರು

ಜಾಹೀರಾತು

ಬುಧವಾರ ರಾತ್ರಿ ಫರಂಗಿಪೇಟೆಯ ತೃಷಾಸ್ಟುಡಿಯೋ ಮಾಲೀಕ ದಿನೇಶ್ ಕೊಟ್ಟಿಂಜ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಅಮ್ಮೆಮ್ಮಾರು ನಿವಾಸಿ ಮಹಮ್ಮದ್  ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಪುದ್ದೀನ್(22) ರವರನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್, ಹಾಗೂ ಪೊಲೀಸ್ ಉಪಾಧೀಕ್ಷಕರಾದ ವೆಲಂಟೈನ್ ಡಿಸೋಜ, ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್  ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ  ಹಾಗೂ ಸಿಬ್ಬಂದಿ ದಸ್ತಗಿರಿ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಸವಾದ್ ನ ದಸ್ತಗಿರಿಗೆ  ವಿಶೇಷ ತಂಡವು ಶ್ರಮಿಸುತ್ತಿದೆ.ತನಿಖೆ ಮುಂದುವರೆದಿರುತ್ತದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಬುಧವಾರ ರಾತ್ರಿ 7-15 ಗಂಟೆಗೆ ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಪೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಪೋಟೊ ತೆಗೆಸುವಂತೆ ಬಂದು, ಹಲ್ಲೆ ನಡೆಸಿದ ಬಗ್ಗೆ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣ ನಡೆದು 12 ತಾಸಿನೊಳಗೆ ಆರೋಪಿಗಳನ್ನು ಕ್ಷಿಪ್ರವಾಗಿ ಬಂಟ್ವಾಳ ಪೊಲೀಸರ ಕಾರ್ಯಾಚರಣೆ ಮೂಲಕ ವಶಕ್ಕೆ ತೆಗೆದುಕೊಂಡರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ