ಕಲ್ಲಡ್ಕ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಿಂದ ವಿಟ್ಲ ಕಡೆಗೆ ಸಾಗುವ ರಸ್ತೆಯ ಜಾಗದಲ್ಲಿ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಜಾಗದಲ್ಲಿ ಸರ್ಕಲ್ ಒಂದನ್ನು ನಿರ್ಮಿಸುವಂತೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಗುರುವಾರ ಸಂಜೆ ದೂರವಾಣಿ ಮೂಲಕ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸಿದ ಡಾ. ಭಟ್, ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಿಲ್ಲಾಧಿಕಾರಿ ಇಲ್ಲಿ ವಾರದೊಳಗೆ ವೃತ್ತ ನಿರ್ಮಿಸುವ ಕುರಿತು ಭರವಸೆ ನೀಡಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿರುವ ಕುರಿತು ಪ್ರಸ್ತಾಪಿಸಿದ ಡಾ. ಭಟ್, ಅಪಘಾತಗಳಿಗೂ ಇದು ಕಾರಣವಾಗುವ ಕುರಿತು ಪ್ರಸ್ತಾಪಿಸಿದ್ದರು. ಎರಡೂ ವಿಷಯಗಳಿಗೆ ಜಿಲ್ಲಾಧಿಕಾರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ವಾಹನಗಳು ಇಲ್ಲದೆ ಇದ್ದಾಗ ಕಲ್ಲಡ್ಕ ಜಂಕ್ಷನ್ ಹೀಗೆ ಕಾಣಿಸುತ್ತದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…