ಬಂಟ್ವಾಳ

ಸುರೇಂದ್ರ ಬಂಟ್ವಾಳ್ ಹತ್ಯೆ ಕೇಸ್: ಇದುವರೆಗೆ 9 ಮಂದಿ ಅರೆಸ್ಟ್ – ಎಸ್ಪಿ ಲಕ್ಷ್ಮೀಪ್ರಸಾದ್

ಕಳೆದ ವಾರ ಬಂಟ್ವಾಳ ಬೈಪಾಸ್ ನ ಅಪಾರ್ಟ್ ಮೆಂಟ್ ಒಂದರಲ್ಲಿ ಭೀಕರವಾಗಿ ಹತ್ಯೆಗೀಡಾಗಿದ್ದ ಸುರೇಂದ್ರ ಬಂಟ್ವಾಳ್ (39) ಕೊಲೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದು, ಇದುವರೆಗೆ 9 ಮಂದಿಯನ್ನು ಬಂಧಿಸಿದ್ದಾರೆ. ಹಣಕಾಸು ಮತ್ತು ವೈಯಕ್ತಿಕ ದ್ವೇಷದಿಂದ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇನ್ನಷ್ಟು ಬಂಧನ ನಡೆಯುವ ಸಾಧ್ಯತೆ ಇದ್ದು, ತನಿಖೆ ಸಾಗಿದೆ ಎಂದು ದ.ಕ.ಜಿಲ್ಲಾ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಬಂಟ್ವಾಳದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್ ಕುಲಾಲ್ (39), ನೀರುಮಾರ್ಗ ಬೊಂಡಂತಿಲ ಗ್ರಾಮದ ಗಿರೀಶ್ (28),  ಪ್ರದೀಪ್ ಕುಮಾರ್ ಅಲಿಯಾಸ್ ಪಪ್ಪು, ಶರೀಫ್ ಅಲಿಯಾಸ್ ಸಯ್ಯದ್ ಶರೀಫ್, ವೆಂಕಪ್ಪ ಪೂಜಾರಿ ಅಲಿಯಾಸ್ ವೆಂಕಟೇಶ ಮತ್ತು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ಆಕಾಶಭವನ ಶರಣ್ , ಆರೋಪದಲ್ಲಿ ರಾಜೇಶ್ ಮತ್ತು ದಿವ್ಯರಾಜ್ ಮತ್ತು ಅನಿಲ್ ಪಂಪ್ ವೆಲ್ ಎಂಬವರು ಬಂಧಿತರಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗೆ ದಕ್ಷಿಣ ಕನ್ನಡದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಮ್ ಲಕ್ಷ್ಮೀಪ್ರಸಾದ್, ಬಂಟ್ವಾಳ ಉಪವಿಭಾಗ ಉಪಾಧೀಕ್ಷಕ ವೆಲಂಟೈನ್ ಡಿಸೋಜಾ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖೆಯನ್ನು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್ ನಡೆಸುತ್ತಿದ್ದು ಉಪವಿಭಾಗದ ವಿವಿಧ ಎಸ್.ಐ.ಗಳಾದ  ಅವಿನಾಶ್ ಎಚ್. ಗೌಡ, ಪ್ರಸನ್ನ, ಸಂಜೀವ ಕೆ,  ನಂದಕುಮಾರ್, ಕಲೈಮಾರ್, ವಿನೋದ್ ರೆಡ್ಡಿ, ರಾಜೇಶ್ ಕೆ ವಿ, ಕುಮಾರ್ ಕಾಂಬ್ಳೆ ಪಿಐ ರವಿ ಬಿ ಎಸ್, ಪಿ.ಐ. ಡಿಸಿಐಬಿ ಚೆಲುವರಾಜ್ ಡಿಸಿಐಬಿ ಸಿಬ್ಬಂದಿಗಳು, ತಾಂತ್ರಿಕ ವಿಭಾಗದ ಸಿಬ್ಬಂದಿ, ವಿವಿಧ ಠಾಣೆಗಳ ನುರಿತ ಸಿಬ್ಬಂದಿಗಳನ್ನೊಳಗೊಂಡ ಒಟ್ಟು 5 ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು.

ಯಾಕಾಗಿ ಕೃತ್ಯ: ಇಲ್ಲಿಯವರೆಗೆ ಸೂಕ್ತ ರೀತಿಯಲ್ಲಿ ಯೋಜಿತವಾಗಿ ತನಿಖೆ ನಡೆಯುತ್ತಿದ್ದು ತನಿಖೆಯಲ್ಲಿ ಆರೋಪಿಗಳು ಹಣಕಾಸಿನ ಹಾಗೂ ವೈಯಕ್ತಿಕ ದ್ವೇಷದಿಂದ ಒಳಸಂಚು ನಡೆಸಿ ಕೃತ್ಯ ಎಸಗಿರುವುದು ತಿಳಿದುಬಂದಿದೆ. ದಸ್ತಗಿರಿಯಾಗಿರುವ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳ ಪತ್ತೆಯ ಬಗ್ಗೆ ವಿಶೇಷ ತಂಡವು ಶ್ರಮಿಸುತ್ತಿದ್ದು ತನಿಖೆ ಮುಂದುವರೆದಿದೆ ಎಂದು ಎಸ್ಪಿ ಹೇಳಿದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts