ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾಮದ ಕಲಾಯಿ ಎಂಬಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಅನುದಾನದಲ್ಲಿ ರೂ 7.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕುಡಿಯುವ ನೀರಿನ ಟ್ಯಾಂಕ್ ನ್ನು ಮಾಜಿ ಸಚಿವ ಬಿ. ರಮಾನಾಥ ರೈ ರವರು ಹಾಗೂ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ರಿಚರ್ಡ್ ಮಿನೇಜಸ್,ತಾರನಾಥ ಕಲಾಯಿ,ವಿಶ್ವನಾಥ ಕಲಾಯಿ ಲಚ್ಚಿಲ್, ವಾಸಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.