ಬಂಟ್ವಾಳ: ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ ವಿವಿಧ ಕಾಮಗಾರಿಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, 2 ಕೋಟಿ 60 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಗ್ರಾಮದಲ್ಲಿ ನಡೆದಿದೆ. ಈ ದಿನ ಸುಮಾರು 1.ಕೋಟಿ 70 ಲಕ್ಷ ವೆಚ್ಚದ ವಿವಿಧ ಕಾಮಗಾರಿ ಗಳ ಉದ್ಘಾಟನೆ ಮಾಡಲಾಗಿದೆ ಎಂದರು.
ಈ ಸಂದರ್ಭ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಜಿ.ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ, ಕೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಗೋಳ್ತಮಜಲು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಮನಾಥ ರಾಯಿ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣಾ ಸಹಪ್ರಭಾರಿ ಪ್ರಭಾಕರ ಪ್ರಭು, ಗ್ರಾ.ಪಂ.ಮಾಜಿ ಅಧ್ಯಕ್ಷೆ ಶ್ಯಾಮಲಾ ಶೆಟ್ಟಿ, ಉಪಾಧ್ಯಕ್ಷ ಸುರೇಂದ್ರ ರಾವ್, ಪಕ್ಷದ ಪ್ರಮುಖರಾದ ವಿದ್ಯಾದರ ರೈ ಶಾಂತಪ್ಪ ಪೂಜಾರಿ, ತಿರುಮಲೇಶ್ ಭಟ್, ಸನತ್ ಆಳ್ವ, ಸಂಪತ್ ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ, ಶರತ್ ಕಡೇಶಿವಾಲಯ, ಸುರೇಶ್ ಬನಾರಿ, ಪರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ: ಬಿಜೆಪಿಗೆ ಹಾಕುವ ಪ್ರತಿಯೊಂದು ಮತಗಳು ದೇಶದ ಅಭಿವೃದ್ಧಿಗೆ ಪ್ರಗತಿಗೆ ಪೂರಕವಾಗಿರುತ್ತದೆ ಎಂಬ ದೃಷ್ಟಿಯಿಂದ ಮತ ಚಲಾಯಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ಪಡೆಯುವ ಮೂಲಕ ಕಾಂಗ್ರೆಸ್ ಮುಕ್ತ ಕಡೇಶಿವಾಲಯ ಮಾಡಲು ಕಾರ್ಯಕರ್ತರು ಒಂದಾಗಿ ಎಂದು ಕರೆನೀಡಿದರು.
Be the first to comment on "ಕಡೇಶಿವಾಲಯದಲ್ಲಿ ವಿವಿಧ ಕಾಮಗಾರಿ ಉದ್ಘಾಟನೆ, ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ"