ಬಂಟ್ವಾಳ

ಕಡೇಶಿವಾಲಯದಲ್ಲಿ ವಿವಿಧ ಕಾಮಗಾರಿ ಉದ್ಘಾಟನೆ, ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ ವಿವಿಧ ಕಾಮಗಾರಿಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, 2 ಕೋಟಿ 60 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಗ್ರಾಮದಲ್ಲಿ ನಡೆದಿದೆ. ಈ ದಿನ ಸುಮಾರು 1.ಕೋಟಿ 70 ಲಕ್ಷ ವೆಚ್ಚದ ವಿವಿಧ ಕಾಮಗಾರಿ ಗಳ  ಉದ್ಘಾಟನೆ  ಮಾಡಲಾಗಿದೆ ಎಂದರು.

ಜಾಹೀರಾತು

ಈ ಸಂದರ್ಭ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ,  ಜಿ.ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ, ಕೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಗೋಳ್ತಮಜಲು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಮನಾಥ ರಾಯಿ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣಾ ಸಹಪ್ರಭಾರಿ ಪ್ರಭಾಕರ ಪ್ರಭು, ಗ್ರಾ.ಪಂ.ಮಾಜಿ ಅಧ್ಯಕ್ಷೆ ಶ್ಯಾಮಲಾ ಶೆಟ್ಟಿ, ಉಪಾಧ್ಯಕ್ಷ ಸುರೇಂದ್ರ ರಾವ್, ಪಕ್ಷದ ಪ್ರಮುಖರಾದ ವಿದ್ಯಾದರ ರೈ ಶಾಂತಪ್ಪ ಪೂಜಾರಿ, ತಿರುಮಲೇಶ್ ಭಟ್, ಸನತ್ ಆಳ್ವ, ಸಂಪತ್ ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ, ಶರತ್ ಕಡೇಶಿವಾಲಯ, ಸುರೇಶ್ ಬನಾರಿ, ಪರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ: ಬಿಜೆಪಿಗೆ ಹಾಕುವ ಪ್ರತಿಯೊಂದು ಮತಗಳು ದೇಶದ ಅಭಿವೃದ್ಧಿಗೆ ಪ್ರಗತಿಗೆ ಪೂರಕವಾಗಿರುತ್ತದೆ ಎಂಬ ದೃಷ್ಟಿಯಿಂದ ಮತ ಚಲಾಯಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ಪಡೆಯುವ ಮೂಲಕ ಕಾಂಗ್ರೆಸ್ ಮುಕ್ತ ಕಡೇಶಿವಾಲಯ ಮಾಡಲು ಕಾರ್ಯಕರ್ತರು ಒಂದಾಗಿ ಎಂದು ಕರೆನೀಡಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago