ಬಂಟ್ವಾಳ: ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಿವಾಸಿ ಜಯಲಕ್ಷ್ಮೀ ಜಿ. ಅವರು 2017ನೇ ಸಾಲಿನ ರಾಷ್ಟ್ರೀಯ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಡೇಶ್ವಾಲ್ಯ ಪೆರ್ಲಾಪು ಗಾಣದಕೊಟ್ಯ ನಿವಾಸಿ ದಿ. ವಿಶ್ವನಾಥ ಸಪಲ್ಯ-ರೇವತಿ ದಂಪತಿಯ ಪುತ್ರಿ ಜಯಲಕ್ಷ್ಮೀ. ಇವರು ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಪೂರ್ಣಗೊಳಿಸಿದ ಬಳಿಕ ಆಳ್ವಾಸ್ ನಲ್ಲಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನೂ ಪೂರ್ಣಗೊಳಿಸಿದರು. ಅಲ್ಲಿಯ ಕೋಚ್ ಪ್ರವೀಣ್ ಕುಮಾರ್ ಅವರಿಂದ ಬಾಲ್ ಬ್ಯಾಡ್ಮಿಂಟನ್ ಕಲಿತು ರಾಷ್ಟ್ರಮಟ್ಟದಲ್ಲಿ ಮಿಂಚಿದ್ದು,ಕರ್ನಾಟಕ ತಂಡದ ನಾಯಕಿಯಾಗಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ನಾಲ್ಕು ಬಾರಿ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಈಕೆಯ ಸಾಧನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಜಯಲಕ್ಷ್ಮೀ ಅವರು ಆಳ್ವಾಸ್ ನಲ್ಲಿ ವಿದ್ಯಾರ್ಥಿಗಳಿಗೆ ಬಾಲ್ ಬ್ಯಾಡ್ಮಿಂಟನ್ ತರಬೇತಿ ನೀಡುತ್ತಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಡೇಶಿವಾಲಯದ ಜಯಲಕ್ಷ್ಮೀ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆ"
Be the first to comment on "ಕಡೇಶಿವಾಲಯದ ಜಯಲಕ್ಷ್ಮೀ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆ"