ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಿಎಂ ಸ್ವಾಗತಕ್ಕೆ ತಯಾರಿ
ಸಿಎಂ ಬಿ.ಎಸ್ ಯಡಿಯೂರಪ್ಪ ಬುಧವಾರ ಸಂಜೆ 6 ಗಂಟೆಗೆ ಮಂಗಳೂರಿಗೆ ಬರಲಿದ್ದಾರೆ ನ. 5ರಂದು ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆ ಮುಂಬರುವ ಗ್ರಾಪಂ, ತಾಪಂ, ಜಿಪಂ ಹಾಗೂ ಸ್ಥಳೀಯಾಡಳಿತ ಚುನಾವಣೆಯ ಬಿಜೆಪಿ ವಿಜಯ ಯಾತ್ರೆಗೆ ಮುನ್ನುಡಿ ಬರೆಯಲಿದೆ ಎಂದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಬೆಂಗಳೂರು ಏರ್ ಪೋರ್ಟ್ ನಿಂದ ಹೊರಟು ರಾತ್ರಿ 7 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿ ಅಂದು ಮಂಗಳೂರಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೆಳಿಗ್ಗೆ 10 ಗಂಟೆಗೆ ಟಿ.ವಿ.ರಮಣ್ಣ ಪೈ ಸಭಾಂಗಣದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಅಂದರು.ಅದೇ ದಿನ ಬೆಳಿಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ನಲ್ಲಿ ನಡೆಯಲಿರುವ ಬಿಜೆಪಿ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ರಿಂದ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಅಂದರು. ಅಂದೇ ರಾತ್ರಿ 7.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ರಾತ್ರಿ 8.40 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ ಅಂದರು. ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಒಟ್ಟು ಸಂಘಟನಾತ್ಮಕ ನಿರ್ಧಾರಗಳು ಮಾರ್ಗಸೂಚಿ, ಮಹತ್ವಪೂರ್ವಕ ನಿರ್ಧಾರಗಳು, ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಯ ವಿವರಗಳು, ರಾಷ್ಟ್ರೀಯತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಒಟ್ಟಾರೆ ಕಾರ್ಯಕ್ರಮಗಳು ರಾಜ್ಯಕ್ಕೆ ಹಾಗೂ ದೇಶಕ್ಕೆ ಹೊಸ ಸಂದೇಶ ನೀಡುತ್ತವೆ ಎಂದು ಪೂಜಾರಿ ಹೇಳಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…