ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅಕ್ಟೋಬರ್ 20ರಂದು ನಡೆದ ತುಳು ಚಿತ್ರನಟ ಮತ್ತು ರೌಡಿಶೀಟರ್ ಕೂಡ ಆಗಿರುವ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ, ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರತೀಕ್ (27) ಮತ್ತು ಬೋಂದೆಲ್ ನ ಕೊಂಚಾಡಿ ನಿವಾಸಿ ಜಯೇಶ್ ಯಾನೆ ಸಚ್ಚು (28) ಬಂಧಿತ ಆರೋಪಿಗಳು. ಈ ಆರೋಪಿಗಳೂ ಸೇರಿದಂತೆ ಬಂಧಿತ ಇತರ ಒಂಭತ್ತು ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರೊಂದಿಗೆ ಒಟ್ಟು 11 ಆರೋಪಿಗಳನ್ನು ಬಂಧಿಸಿದಂತಾಗಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)