ಪುಣಚದಲ್ಲಿ ಜಲ್ಲಿ ಸಾಗಾಟದ ಟಿಪ್ಪರ್ ಪಲ್ಟಿ: ಚಾಲಕ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ: ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ.

ಪುಣಚ ಸಮೀಪ ಇರುವ ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಪುಣಚ ಗ್ರಾಮದ ಪಾಲತ್ತಡ್ಕ ಎಂಬಲ್ಲಿ  ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದಿದೆ. ಚಾಲಕ ಟಿಪ್ಪರ್ ಕೆಳಗಡೆ ಹಲವು ಸಮಯಗಳ ವರೆಗೆ  ಸಿಕ್ಕಿಹಾಕಿಕೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಲ್ಲಿ ಮೃತದೇಹ ಮೇಲೆತ್ತಲಾಯಿತು. ಮತ್ತೊಬ್ಬ ಕ್ಲೀನರ್ ಗಾಯಗೊಂಡಿದ್ದಾರೆ.  ಚಾಲಕನ ವಿವರ ನಿರೀಕ್ಷಸಲಾಗುತ್ತಿದೆ.  ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುಣಚದಲ್ಲಿ ಜಲ್ಲಿ ಸಾಗಾಟದ ಟಿಪ್ಪರ್ ಪಲ್ಟಿ: ಚಾಲಕ ಸ್ಥಳದಲ್ಲಿಯೇ ಮೃತ್ಯು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*