ಬಂಟ್ವಾಳ: ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ.
ಪುಣಚ ಸಮೀಪ ಇರುವ ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಪುಣಚ ಗ್ರಾಮದ ಪಾಲತ್ತಡ್ಕ ಎಂಬಲ್ಲಿ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದಿದೆ. ಚಾಲಕ ಟಿಪ್ಪರ್ ಕೆಳಗಡೆ ಹಲವು ಸಮಯಗಳ ವರೆಗೆ ಸಿಕ್ಕಿಹಾಕಿಕೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಲ್ಲಿ ಮೃತದೇಹ ಮೇಲೆತ್ತಲಾಯಿತು. ಮತ್ತೊಬ್ಬ ಕ್ಲೀನರ್ ಗಾಯಗೊಂಡಿದ್ದಾರೆ. ಚಾಲಕನ ವಿವರ ನಿರೀಕ್ಷಸಲಾಗುತ್ತಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…