ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಭಾರಿ ಮಳೆಯಿಂದ ಲೋಕೋಪಯೋಗಿ ಇಲಾಖೆಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಹಾನಿಗೊಂಡಿದ್ದು, ಅದನ್ನು ಪುನಃ ಸ್ಥಾಪಿಸಲು ಹೆಚ್ಚಿನ ಅನುದಾನ ನೀಡುವಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮತ್ತು ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ವಿಶೇಷ ಅನುದಾನ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರಿಗೆ ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಮುಜರಾಯಿ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಮನವಿ ಪತ್ರ ನೀಡಿರುತ್ತಾರೆ. ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.