ಬಂಟ್ವಾಳ: ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಬಂಟ್ವಾಳದಿಂದ ಕರ್ತವ್ಯ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದ ಬಳಿಕ ಶುಕ್ರವಾರ ಬೆಳಗಿನ ಜಾವ ತನ್ನ ಮನೆಯಲ್ಲಿ ನಿಧನ ಹೊಂದಿದರು.ತಾಯಿ, ಪತ್ನಿ ಸಹಿತ ಅಪಾರ ಬಂಧು, ಮಿತ್ರರನ್ನು ಅವರು ಅಗಲಿದ್ದಾರೆ. ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮುಂಗಾರು ಪತ್ರಿಕೆ ಸಹಿತ ಸ್ಥಳೀಯ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು ಬಳಿಕ ಸುದೀರ್ಘ ಕಾಲ ಬಂಟ್ವಾಳದಿಂದ ಕನ್ನಡ ಜನಾಂತರಂಗ, ಕರಾವಳಿ ಅಲೆ ಪತ್ರಿಕೆಗಳ ವರದಿಗಾರರಾಗಿ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…