ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜ ಅಯ್ಕೆಯಾಗಿದ್ದಾರೆ
ಶನಿವಾರ ಚುನಾವಣೆ ಪ್ರಕ್ರಿಯೆ ಆರಂಭಗೊಂಡಾಗ, ಬಿಜೆಪಿಯ ಗೋವಿಂದ ಪ್ರಭು ಮತ್ತು ಎಸ್.ಡಿ.ಪಿ.ಐನ ಮುನೀಶ್ ಆಲಿ ಅಧ್ಯಕ್ಷ ಸ್ಥಾನಕ್ಕೆ ಮೀನಾಕ್ಷಿ ಗೌಡ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರೂ ನಾಮಪತ್ರ ಸಲ್ಲಿಸಲು ಬೆಳಗ್ಗೆ 10.30ಕ್ಕೆ ಕೊನೆಯ ಗಳಿಗೆವರೆಗೂ ಕಾಂಗ್ರೆಸ್ ಕಚೇರಿಯಲ್ಲಿ ಅಭ್ಯರ್ಥಿ ಆಯ್ಕೆಗೆ ಕೊನೆ ಘಳಿಗೆವರೆಗೂ ಸಮಾಲೋಚನೆ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ನಿಂದ ಮಹಮ್ಮದ್ ಶರೀಫ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಜೆಸಿಂತಾ ಡಿಸೋಜ ನಾಮಪತ್ರ ಸಲ್ಲಿಸಿದರು.
ಬಳಿಕ ನಡೆದ ಬೆಳವಣಿಯಲ್ಲಿ ಎಸ್.ಡಿ.ಪಿ.ಐ.ನ ಮುನೀಶ್ ಆಲಿ ನಾಮಪತ್ರ ಹಿಂತೆಗೆದರು. ಕಾಂಗ್ರೆಸ್ ಪರವಾಗಿ 16, ಬಿಜೆಪಿ ಪರವಾಗಿ 13 ಮತಗಳು ಚಲಾವಣೆಯಾದವು.
2018, ಆಗಸ್ಟ್ 31ರಂದು ನಡೆದ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ದೊರಕಿತ್ತು. 27 ಸ್ಥಾನಗಳ ಪೈಕಿ, ಕಾಂಗ್ರೆಸ್ 12, ಬಿಜೆಪಿ 11, ಎಸ್.ಡಿ.ಪಿ.ಐ. 4 ಸ್ಥಾನಗಳನ್ನು ಗೆದ್ದಿದ್ದವು.