ಎಬಿವಿಪಿಯಿಂದ ಬಂಟ್ವಾಳ ತಾಲೂಕು ಮಟ್ಟದ ಅಭ್ಯಾಸ ವರ್ಗ

ಜಾಹೀರಾತು

ಬಂಟ್ವಾಳ: ಸಿದ್ಧಕಟ್ಟೆಯ ಹರ್ಷಲಿ ಸಭಾಂಗಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ತಾಲೂಕು ಅಭ್ಯಾಸವರ್ಗ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯವನ್ನು ಮಾಡುತ್ತಾ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಹಾಗೂ ಸಂಸ್ಕೃತಿ ಯ ಬಗೆಗಿನ ಪ್ರಜ್ಞೆ ಮೂಡಿಸುವ ಕಾರ್ಯ ಮಾಡುತ್ತಿದೆ ಎಂದರು.

ಕಂಬಳ ಓಟಗಾರಿಕೆಯ ಮೂಲಕ ಪ್ರಸಿದ್ಧಿ ಪಡೆದು ಕರ್ನಾಟಕ ದ ಪ್ರತಿಷ್ಟಿತ ಕರ್ನಾಟಕ ಕ್ರೀಡಾರತ್ನ ಪುರಸ್ಕೃತ ಸುರೇಶ್ ಎಂ.ಶೆಟ್ಟಿ ಹಕ್ಕೇರಿ ಅವರನ್ನು ಸನ್ಮಾನಿಸಲಾಯಿತು.ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ಮಂಗಳೂರು ವಿಭಾಗ ಪ್ರಮುಖರಾದ ಕೇಶವ ಬಂಗೇರ ಹಿರಿಯ ಕಾರ್ಯಕರ್ತರಾದ ಶೀತಲ್ ಕುಮಾರ್ ಜೈನ್ ಕಾರ್ಕಳ ಮಾಹಿತಿ ನೀಡಿದರು. ಸಮಾರೋಪ ಸಮಾರಂಭದಲ್ಲಿ ಬಂಟ್ವಾಳ ಹಾಗೂ ಸಿದ್ದಕಟ್ಟೆ ನಗರದ ನೂತನ ಕಾರ್ಯಕಾರಿಣಿ ಯನ್ನು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ ಘೋಷಿಸಿದರು

ಸಮಾರೋಪದಲ್ಲಿ ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ಜಿಲ್ಲಾ ಸಂಚಾಲಕರಾದ ಸಂದೇಶ್ ರೈ ಮಜಕ್ಕಾರ್ ಉಪಸ್ಥಿತರಿದ್ದರು. ಅಭ್ಯಾಸ ವರ್ಗದಲ್ಲಿ ಸಿದ್ದಕಟ್ಟೆ ಪರಿಸರದ ವಿದ್ಯಾರ್ಥಿ ಪರಿಷತ್ ನ ಹಿತೈಷಿಗಳಾದ ರತ್ನಕುಮಾರ್ ಚೌಟ, ಪ್ರಭಾಕರ ಪ್ರಭು, ಉಮೇಶ್ ಗೌಡ, ದೀಪಕ್ ಶೆಟ್ಟಿಗಾರ್, ಮಂದಾರತಿ, ಮಾಧವ ಶೆಟ್ಟಿಗಾರ್, ವಿಶ್ವನಾಥ ಶೆಟ್ಟಿಗಾರ್, ಮಹೇಶ್ ಕರ್ಕೇರ, ಸತೀಶ್ ಪೂಜಾರಿ ಅಳಕೆ, ರಾಜೇಶ್ ಕೊನೆರೊಟ್ಟು ಉಪಸ್ಥಿತರಿದ್ದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಬಿವಿಪಿಯಿಂದ ಬಂಟ್ವಾಳ ತಾಲೂಕು ಮಟ್ಟದ ಅಭ್ಯಾಸ ವರ್ಗ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*