ಬಂಟ್ವಾಳ: ಬಂಟ್ವಾಳ ತಾಲೂಕು ಪಂಜಿಕಲ್ಲು ಗ್ರಾಮದ ಬಂಡಸಾಲೆ ಮನೆ ನಿವಾಸಿ ನಾರಾಯಣ ಭಂಡಾರಿ ಅವರ ಮಗಳಾದ ನಿಧಿ. ಬಿ.ಎನ್ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿ.ಎಸ್.ಐ ನೇರ ನೇಮಕಾತಿ ಹುದ್ದೆಗೆ ಆಯ್ಕೆಯಾಗಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಲಾಯಿತು. ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೆಂಟೈನ್ ಡಿʻಸೋಜಾ ರವರು, ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ ನಾಗರಾಜ್ ರವರು, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…