ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗ್ರಾಮೀಣ ವಿದ್ಯಾರ್ಥಿ ಗಳಿಗಾಗಿ ಅನುಷ್ಠಾನಗೊಳಿಸಲಾದ ” ಜ್ಞಾನತಾಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅರ್ಹರಿಗೆ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳನ್ನು ಯೋಜನೆಯ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಂತ್ರಜ್ಞಾನದ ಮೂಲಕ ಶಿಕ್ಷಣದ ಉದ್ದೇಶವನ್ನು ಈಡೇರಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂಪಿಸಿರುವ ಜ್ಞಾನತಾಣ ಕಾರ್ಯಕ್ರಮ ವಿಶಿಷ್ಟವಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮಸ್ಥಳ ಯೋಜನೆಯಿಂದ ಶೈಕ್ಷಣಿಕ ಉದ್ಧೇಶಗಳಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಜ್ಞಾನತಾಣ ಯೋಜನೆಯ ಮೂಲಕ ಒಂದೇ ದಿನದಲ್ಲಿ ರಾಜ್ಯಾದ್ಯಂತ 20 ಸಾವಿರ ಟ್ಯಾಬ್ ಹಾಗೂ 10 ಸಾವಿರ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುತ್ತಿದೆ ಎಂದರು.
ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಎ.ಸಿ.ಭಂಡಾರಿ, ರೋಟರಿ ಕ್ಲಬ್ ನ ನಿಯೋಜಿತ ಗವರ್ನರ್ ಪ್ರಕಾಶ್ ಕಾರಂತ, ಶಿಕ್ಷಣ ಸಂಯೋಜಕಿ ಸುಜಾತಾ, ಬಂಟ್ವಾಳ ಜನಜಾಗೃತಿ ವೇದಿಕೆ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಎನ್.ಐ.ಎಸ್. ಯೋಜನಾಧಿಕಾರಿ ಮಹಂತೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು. ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕ ಕೇಶವ ಕೆ. ವಂದಿಸಿದರು.