ಪೊಲೀಸರು ಎಂದು ನಂಬಿಸಿ ಚಿನ್ನ, ನಗದು ಕದ್ದೊಯ್ದ ಇಬ್ಬರ ಬಂಧನ

ಜಾಹೀರಾತು

ಬಂಟ್ವಾಳ: ಬಿಸಿರೋಡಿನ ಕೈಕಂಬದಲ್ಲಿ ಕ್ರೈಮ್ ಬ್ರಾಂಚ್ ಪೋಲೀಸರೆಂದು ನಂಬಿಸಿ ವ್ಯಕ್ತಿಯೋರ್ವರ ಬಂಗಾರ ದೋಚಿದ ಪ್ರಕರಣದಲ್ಲಿ ಇರಾನಿ ಗ್ಯಾಂಗ್ ಸದಸ್ಯರಾದ ಮಹಾರಾಷ್ಟ್ರ ದ ಜಾಕೀರ್ ಹುಸೇನ್ (26) ಮತ್ತು ಕಂಬರ್ ರಹೀಂ ಮಿರ್ಜಾ (32) ಬಂಧನಕ್ಕೊಳಗಾಗಿದ್ದಾರೆ.

2020 ರ  ಜ.18 ರಂದು ಮಧ್ಯಾಹ್ನ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಮಿತ್ತಬೈಲು ಕೊಡಂಗೆ ನಿವಾಸಿ ಶಿವಪ್ರಸಾದ್ ಶರ್ಮ ಅವರು ಕೈಕಂಬದಲ್ಲಿ ನಡೆದುಕೊಂಡು ಹೋಗುವ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿ ಕರೆದು ನಾನು ಕ್ರೈಂ ಬ್ರಾಂಚ್ ಪೋಲೀಸ್ ಆಫೀಸರ್ ನಿಮ್ಮನ್ನು ಚೆಕ್ ಮಾಡಲು ಇದೆ ಎಂದು ಇವನ ಜೊತೆ ಬಂದ ಇನ್ನೊಬ್ಬ ಕೂಡ ಅದೇ ಮಾತು ಹೇಳಿ ನಂಬಿಸಿ ಅವರು ಐಡೆಂಟಿಟಿ ಕೇಳಿದಾಗ ಆಶೋಕ್ ಕುಮಾರ್ ಕ್ರೈಂ ಬ್ರಾಂಚ್ ಎಂದು ಬರೆದಿರುವ  ಕಾರ್ಡು ತೋರಿಸಿದ ಆರೋಪಿಗಳು ಇವರ ಬಳಿಯಲ್ಲಿದ್ದ ಬಂಗಾರ ಮತ್ತು ಹಣವನ್ನು ಕೇಳಿ ಪಡೆದುಕೊಂಡು ಇದನ್ನು ಕರವಸ್ತ್ರದಲ್ಲಿ ಕಟ್ಟಿಕೊಡುತ್ತೇವೆ ಹೀಗೆ ತಿರುಗಾಡ ಬಾರದೆಂದು ಹೇಳಿ ಪಡದುಕೊಂಡಿದ್ದರು.ಬಳಿಕ ಕರವಸ್ತ್ರದಲ್ಲಿ ಕಟ್ಟಿಕೊಂಡ ಲಕ್ಷಾಂತರ ರೂ ಮೌಲ್ಯದ ಬಂಗಾರ ಮತ್ತು ಹಣವನ್ನು ಹಿಡಿದುಕೊಂಡು ಬೈಕಿನಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ರೀತಿ ಕುಂದಾಪುರ ಮತ್ತು ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದ್ದು ಈ ಪ್ರಕರದಣಲ್ಲಿ ಉಡುಪಿ ನಗರ  ಪೋಲೀಸರು  ಇರಾನಿ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬಂಟ್ವಾಳದ ಪ್ರಕರಣದ ಬಗ್ಗೆ ಬಾಯಿಬಿಟ್ಟಿದ್ದಾರೆ. ಬಳಿಕ ಹಿರಿಯಡ್ಕ ಕಾರಾಗೃಹ ದಲ್ಲಿದ್ದ ಆರೋಪಿಗಳನ್ನು ಇಲ್ಲಿನ ಪ್ರಕರಣದ ವಿಚಾರಣೆಗಾಗಿ ಬಂಟ್ವಾಳ ನಗರ ಠಾಣೆಗೆ ಆರೋಪಿಗಳನ್ನು ಕರೆತಂದಿದ್ದು ಆರೋಪಿಗಳ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಮೇಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಅಪರಾಧ ವಿಭಾಗದ ಎಸ್.ಐ. ಕಲೈಮಾರ್ ಪಿ. ಆರೋಪಿಗಳನ್ನು ಪೋಲೀಸ್ ಕಸ್ಟಡಿಗೆ ಪಡೆದು ತನಿಖೆಗೆ ಒಳಪಡಿಸಿರುತ್ತಾರೆ.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪೊಲೀಸರು ಎಂದು ನಂಬಿಸಿ ಚಿನ್ನ, ನಗದು ಕದ್ದೊಯ್ದ ಇಬ್ಬರ ಬಂಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*