ಬಂಟ್ವಾಳ

ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಜಾಹೀರಾತು

 ಬಂಟ್ವಾಳ: ಬಂಟ್ವಾಳ ತಾಪಂ ಕಚೇರಿ ಎದುರು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ತಾಪಂ ಇಒ ರಾಜಣ್ಣ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಅಕ್ಷರ ದಾಸೋಹ ಸಂಘದ ಅಧ್ಯಕ್ಷೆ ವಿನಯ ನಡುಮೊಗರು, ಕಾರ್ಯದರ್ಶಿ ಶಾರದಾ, ಲೀಲಾ, ಶಾಂತಾ, ಉದಯಕುಮಾರ್ ಬಂಟ್ವಾಳ, ರಾಮಣ್ಣ ವಿಟ್ಲ, ಲೋಲಾಕ್ಷಿ ಉಪಸ್ಥಿತರಿದ್ದರು.

ನೂತನ ಶಿಕ್ಷಣ ನೀತಿ ೨೦೨೦ ನ್ನು ಜಾರಿ ಮಾಡುವಾಗ ಬಿಸಿಯೂಟ ಯೋಜನೆಯನ್ನು ಬಲಿಷ್ಠ ಪಡಿಸಿ ಈಗಿರುವ ಮಾದರಿಯನ್ನು ಮುಂದುವರಿಸಬೇಕು, ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ . ಯಾವೂದೇ ಖಾಸಗಿ ಸಂಸ್ಥೆಗಳಿಗೆ ಯಾವೂದೇ ಸ್ವರೂಪದ ಜವಾಬ್ದಾರಿ ಕೊಡಬಾರದು, ಕೆಲಸದ ಅವಧಿಯನ್ನು ೪ ಗಂಟೆಯಿಂದ ೬ ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು,        ಶಾಲೆಗಳಲ್ಲಿ ಗ್ರೂಪ್ ಡಿ ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಛತೆ, ಕೈತೋಟ ನಿರ್ವಹಣೆ ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು, ಕರೋನಾ ಸಂದರ್ಭದ ವೇತನ ೨೦೨೦ ಎಪ್ರಿಲ್ ನಿಂದಲೇ ಕೊಡಬೇಕು, . ಬಿಸಿಯೂಟ ಮಹಿಳೆಯರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ, ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು,  ಪ್ರತಿ ಶಾಲೆಯಲ್ಲಿ ಕನಿಷ್ಟ ೨ ಜನ ಅಡುಗೆಯವರು ಇರಲೇಬೇಕು, ನಿವೃತ್ತಿ ವೇತನ ಮತ್ತು ಆರೋಗ್ಯ ಸೌಲಭ್ಯ ಒದಗಿಸಿ, ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆದಾಯ ತೆರಿಗೆ ವ್ಯಾಪ್ತಿ ಹೊರಗಿರುವ ಕುಟುಂಬಗಳಿಗೆ ೭೫೦೦ ರೂ. ನಗದು ನೀಡಬೇಕು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೆಲಸದ ದಿನಗಳನ್ನು ವಾರ್ಷಿಕ ೨೦೦ ದಿನಗಳಿಗೆ ವಿಸ್ತರಿಸಿ ಕನಿಷ್ಟ ಕೂಲಿ ೬೦೦ರೂ. ಹೆಚ್ಚಿಸಿ  ಎಲ್ಲರಿಗೂ ನರೇಗಾ ಕೆಲಸ ಕೊಡಬೇಕು. ರೈತ ವಿರೋಧಿ ಕಾನೂನುಗಳು ಮತ್ತು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂತೆಗೆದುಕೊಳ್ಳಿ. ಎಲ್ಲರಿಗೂ ಎಲ್.ಐ.ಸಿ.ಆಧಾರಿತ ಖಾಯಂ ಪಿಂಚಣಿ ಒದಗಿಸಿ ಎಂಬುದು ಬೇಡಿಕೆ ಪಟ್ಟಿಯಲ್ಲಿವೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts