ಡಿಸಿಐಬಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಸಾಗಾಟ ಪತ್ತೆ, ಆರೋಪಿಗಳ ಸೆರೆ

ಜಾಹೀರಾತು

ಬಂಟ್ವಾಳ: ಬಿ.ಸಿ.ರೋಡಿನಿಂದ ಮಾಣಿ ಮಾರ್ಗದಲ್ಲಿರುವ ಮೇಲ್ಕಾರ್ ಬಸ್ ನಿಲ್ದಾಣದಲ್ಲಿ ಬ್ರೀಜಾ ಕಾರೊಂದರಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಡಿಸಿಐಬಿ ಪೊಲೀಸರು 1.48 ಕೆಜಿ ಗಾಂಜಾ ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಬಂದರು ಅನ್ಸಾರಿ ಕ್ರಾಸ್ ರೋಡ್ ನಿವಾಸಿ ಟಿ.ಪಿ.ಫಾರೂಕ್ (50) ಮತ್ತು ನೇಪಾಳದ ನಿವಾಸಿ, ಸದ್ಯ ಪಿವಿಎಸ್ ವೃತ್ತದ ಬಳಿ ಪಿಜಿಯಲ್ಲಿ ವಾಸವಿರುವ ಸಾಗರ್ ಸಿಂಗ್ (22) ಬಂಧಿತ ಆರೋಪಿಗಳು.

ಇಬ್ಬರೂ ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ಒಪ್ಪಿಕೊಂಡಿದ್ದು, ಬಳಿಕ ಅವರ ವಶದಲ್ಲಿದ್ದ ಒಟ್ಟು 1.480 ಕಿ.ಗ್ರಾಂ ಗಾಂಜಾವನ್ನು ಮತ್ತು ಅದನ್ನು ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಬ್ರೀಝಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 10.32 ಲಕ್ಷಗಳಾಗಿವೆ. ಆರೋಪಿಗಳನ್ನು ಮತ್ತು ಸೊತ್ತುಗಳನ್ನು ಮುಂದಿನ ಕ್ರಮದ ಬಗ್ಗೆ ಬಂಟ್ವಾಳ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ.

ಡಿ.ಸಿ.ಐ.ಬಿ ಪೊಲೀಸ್‌ ನಿರೀಕ್ಷಕರಾದ ಚೆಲುವರಾಜು ಬಿ ಅವರಿಗೆ ಬಿಳಿ ಬಣ್ಣದ ಬ್ರೀಝಾ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಬಿ.ಸಿ ರೋಡ್‌ನಿಂದ ಮಾಣಿ ಮಾರ್ಗದಲ್ಲಿ ಗಿರಾಕಿಗಳಿಗೆ ಮಾರಾಟ ಮಾಡಲು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಪೊಲೀಸ್‍ ನಿರೀಕ್ಷಕರು ತಮ್ಮ ಸಿಬ್ಬಂದಿ ಜೊತೆ ಮೆಲ್ಕಾರ್‍ ಬಸ್ಸುನಿಲ್ದಾಣದ ಬಳಿ ನಿಂತಿದ್ದ ಸದ್ರಿ ಬ್ರೀಜಾ ಕಾರನ್ನು ಕಂಡು ಅದರಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಹಿಡಿದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂತು. ಈ ಕಾರ್ಯಾಚರಣೆಯನ್ನು ಡಿ.ಸಿ.ಐ.ಬಿ ಪೊಲೀಸ್‍ ನಿರೀಕ್ಷರಾದ ಚೆಲುವರಾಜು ಬಿ ನೇತೃತ್ವದಲ್ಲಿ ಡಿ.ಸಿ.ಐ.ಬಿ ಸಿಬ್ಬಂದಿಗಳಾದ ಲಕ್ಷ್ಮಣ ಕೆ.ಜಿ, ಉದಯ ರೈ, ಪ್ರವೀಣ್‍ ಎಂ, ತಾರಾನಾಥ್‍, ಪ್ರವೀಣ್‍ ರೈ, ಶೋನ್‍ಶಾ, ಸುರೇಶ್‍ ನಡೆಸಿದ್ದು, ತಾಂತ್ರಿಕ ವಿಭಾಗದ ಸಂಪತ್‍ ಮತ್ತು ದಿವಾಕರ್ ಸಹಕರಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡಿಸಿಐಬಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಸಾಗಾಟ ಪತ್ತೆ, ಆರೋಪಿಗಳ ಸೆರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*