ಬಂಟ್ವಾಳ: ಬಿಹಾರ ವಿಧಾನಸಭಾ ಚುನಾವಣೆ ಮತ್ತು ರಾಜ್ಯದ ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ,ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸಹಿತ ಕಾರ್ಯಕರ್ತರು ಸಂಭ್ರಮಾಚರಿಸಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ನಾಗಸ್ವರ ವಾದಕ ಪ್ರಶಾಂತ್ ಜೋಗಿ ಸಜಿಪ ರವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರ.ಕಾರ್ಯದರ್ಶಿ ಡೊಂಬಯ ಅರಳ,ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಹಿಂದುಳಿದ ಮೋರ್ಛಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.ಹಿ.ಮೋರ್ಛಾದ ಪ್ರ.ಕಾರ್ಯದರ್ಶಿಗಳಾದ ಮಹೇಶ್ ಜೋಗಿ,ಮೋನಪ್ಪ ದೇವಸ್ಯ, ಪ್ರಮುಖರಾದ ವಿಠಲಪೂಜಾರಿ,ಉಮೇಶ್ ಅರಳ,ಮಚ್ಚೇಂದ್ರನಾಥ ಸಾಲ್ಯಾನ್ ,ಸೀತಾರಾಮ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.