ಜಿಲ್ಲಾ ಸುದ್ದಿ

ಹೆದ್ದಾರಿ ದುರಸ್ತಿ: ಸ್ಪಷ್ಟ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ ದ.ಕ.ಜಿಲ್ಲಾಧಿಕಾರಿ

ರಾಷ್ಟ್ರೀಯ ಹೆದ್ದಾರಿ

ಜಾಹೀರಾತು

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಿ. ಹೀಗೆಂದು ಬುಧವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಗಡುವು ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರು ಸುರಕ್ಷಿತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಹೇಳಿರುವ ಅವರು, ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ಅಭಿವೃದ್ಧಿ ಕಾರ್ಯಗಳ ಕಾಮಗಾರಿಗಳನ್ನು ವಿಳಂಬ ಮಾಡದೇ ಆದ್ಯತೆಯ ಮೇಲೆ ಕೈಗೊಂಡು ಸಾರ್ವಜನಿಕರ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಗಮನಹರಿಸಲು ತಿಳಿಸಿದ್ದಾರೆ.

ಅಡ್ಡಹೊಳೆಯಿಂದ -ಬಂಟ್ವಾಳದವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಿಸಲು 17 ಗ್ರಾಮಗಳ ಒಳಗೊಂಡಂತೆ 35 ಹೆಕ್ಟೇರ್ ಜಮೀನನ್ನು 680 ಮಂದಿ ಖಾತೆದಾರರಿಂದ ಭೂ-ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಮಾಲೀಕರಿಗೆ ಭೂಸ್ವಾಧೀನದ ಪ್ರಕ್ರಿಯೆಯಂತೆ 3ಜಿ ಅವಾರ್ಡ್‍ಗಳನ್ನು 10 ದಿನದ ಒಳಗೆ ಸಹಾಯಕ ಆಯುಕ್ತರು ಹಾಗೂ ಎನ್.ಹೆಚ್ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಪೂರ್ಣಗೊಳಿಸಬೇಕೆಂದು ತಿಳಿಸಿದರು.

ಮಾಣಿಯಿಂದ ಬಿ.ಸಿ ರೋಡ್ ಜಂಕ್ಷನ್‍ವರೆಗಿನ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳನ್ನು ಈ ತಿಂಗಳ ನವೆಂಬರ್ 30 ರ ಒಳಗೆ ಪೂರ್ಣಗೊಳಿಸಬೇಕೆಂದು ಎನ್.ಹೆಚ್.ಎ.ಐ ಯೋಜನಾ ನಿರ್ದೇಶಕರಿಗೆ ಸೂಚಿಸಿದ ಅವರು, ಗುಂಡ್ಯ-ಅಡ್ಡಹೊಳೆ ರಸ್ತೆಗಳ ಗುಂಡಿಗಳನ್ನು ಸಹ ಮುಚ್ಚುವ ಕಾರ್ಯ ಕೈಗೊಳ್ಳಬೇಕೆಂದು ತಿಳಿಸಿದರು.

ರಸ್ತೆ  ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಕಚ್ಚಾ ವಸ್ತುಗಳನ್ನು ಎಮ್.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಪೂರೈಕೆ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಮಾಣಿ ಮತ್ತು ಬಿ.ಸಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ಯಾವುದೇ  ರೀತಿಯ ಟ್ರಾಫಿಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕೆಂದು ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್, ಎನ್.ಹೆಚ್.ಎ.ಐ ನ ಯೋಜನಾ ನಿರ್ದೇಶಕರು, ವಿಶೇಷ ಭೂ-ಸ್ವಾಧೀನ ಅಧಿಕಾರಿಗಳು, ಪುತ್ತೂರು ಉಪ ವಿಭಾಗದ ವಿಭಾಗಾಧಿಕಾರಿ ಹಾಗೂ ಎನ್.ಹೆಚ್.ಎ.ಐ ನ ತಾಂತ್ರಿಕ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts